ಆಳಂದ: ತಾಲೂಕಿನ ರುದ್ರವಾಡಿ ಗ್ರಾಮ ಪಂಚಾಯತಿಯ ಮೊದಲ ಅವಧಿಯ ೩೦ ತಿಂಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಮಂಗಳವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಬೆಂಬಲಿತ ಬಂಗರಗಾ ಗ್ರಾಮದ ಪ್ರಕಾಶ ಭೂಸಣಗೆ ಅಧ್ಯಕ್ಷರಾಗಿ, ಜಮಗಾ ಆರ್ ಗ್ರಾಮದ ಶಾಂತಾಬಾಯಿ ಬಸವರಾಜ ಕಾಂಬಳೆ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಗ್ರಾಮ ಪಂಚಾಯತ ಕಚೇರಿಯಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪ್ರಕಾಶ ಭೂಸಣಗೆ, ಪ್ರಕಾಶ ಪಾಟೀಲ, ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲಮ್ಮ ಶ್ರೀಮಂತ ಕಾಂಬಳೆ, ಶಾಂತಾಬಾಯಿ ಬಸವರಾಜ ಕಾಂಬಳೆ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರಕಾಶ ಭೂಸಣಗೆ ೧೪ ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಪ್ರಕಾಶ ಪಾಟೀಲ ಅವರನ್ನು ೨ ಮತಗಳ ಅಂತರದಿಂದ ಸೋಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶಾಂತಾಬಾಯಿ ಬಸವರಾಜ ಕಾಂಬಳೆ ೧೩ ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಮಲ್ಲಮ್ಮ ಶ್ರೀಮಂತ ಕಾಂಬಳೆ ಅವರನ್ನು ೧ ಮತದ ಅಂತರದಿಂದ ಪರಾಭವಗೊಳಿಸಿದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಖಜೂರಿ ಜಿಲ್ಲಾ ಪಂಚಾಯತ ಸದಸ್ಯ ಹರ್ಷಾನಂದ ಗುತ್ತೇದಾರ ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಚುನಾವಣಾಧಿಕಾರಿಯಾಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಕಾರ್ಯನಿರ್ವಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…