ಕಲಬುರಗಿ: ರಾಜ್ಯದ ಅಲ್ಪ ಸಂಖ್ಯಾತರ ಇಲಾಖೆ ವತಿಯಿಂದ ಜೈನ ಧರ್ಮಿಯರ ಬಹು ವರ್ಷಗಳ ಬೇಡಿಕೆಯಾದ ಜೈನ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ವಸತಿ ನಿಲಯಗಳನ್ನು ಪ್ರಾರಂಭಿಸುವಂತೆ ಕೋರಿ ರಾಜ್ಯದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ ಪಾಟೀಲ ರವರಿಗೆ ಮನವಿ ಸಲ್ಲಿಸಲಾಗಿದ್ದು, ಬರುವ ರಾಜ್ಯ ಸರ್ಕಾರದ ಆಯ-ವ್ಯಯದಲ್ಲಿ ಪ್ರತ್ಯೇಕ ವಸತಿ ನಿಲಯ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ನಿ., ನಿರ್ದೇಶಕರಾದ ಸುರೆಶ ತಂಗಾ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ಅವರು ಈಗಾಗಲೇ ಅಲ್ಪ ಸಂಖ್ಯಾತರ ಇಲಾಖೆಯಲ್ಲಿ ಬರುವ ವಸತಿ ನಿಲಯಗಳಲ್ಲಿ ಜೈನ ಧರ್ಮದ ಎದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು ಆದರೆ ಜೈನ ಧರ್ಮದ ಆಹಾರ-ವಿಹಾರ ಪದ್ಧತಿ ಬೇರೆಯಾಗಿರುವುದರಿಂದ ಮತ್ತು ಜೈನ ಧರ್ಮೀಯರು ಶುದ್ಧ ಶಾಖಾಹಾರಿಗಳಾಗಿರುವುದರಿಂದ ವಿದ್ಯಾರ್ಥಿ ವಸತಿ ನಿಲಯದಲ್ಲಿ ಇರಲು ಎದ್ಯಾರ್ಥಿಗಳಿಗೆ ಹೊಂದಣಿಕೆ- ಯಾಗುತ್ತಿಲ್ಲ. ಇದರಿಂದ ವಸತಿ ನಿಲಯದ ಸೌಲಭ್ಯ ಪಡೆಯಲಾಗುತ್ತಿಲ್ಲ. ಹೀಗಾಗಿ ಜೈನ ಧರ್ಮದ ಸಾವಿರಾರು ಎದ್ಯಾರ್ಥಿಗಳು ಉನ್ನತ ಶಿಕ್ಷಣದಿ೦ದ ವಂಚಿತರಾಗುತ್ತಿದ್ದಾರೆ೦ದು ಸಚಿವರ ಗಮನಕ್ಕೆ ತಂದಾಗ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಇದರ ಬಗ್ಗೆ ಚರ್ಚೆ ನಡೆದಿದ್ದು ಸಕಾರಾತ್ಮಕವಾಗಿ ಮುಖ್ಯಮಂತ್ರಿಗಳು ಸಹ ಸ್ಪಂದಿಸಿದ್ದು, ಬರುವ ಬಜೇಟ್‌ನಲ್ಲಿ ಜೈನ ಧರ್ಮೀಯರ ಪ್ರತ್ಯೇಕ ವಸತಿ ನಿಲಯಗಳನ್ನು ಪ್ರಾರಂಭಿಸುವ ನಿರೀಕ್ಷೆ ಇದೆ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಜೈನ ಸಮಾಜದ ಯುವ ಮುಖಂಡರಾದ ರಾಜೇ೦ದ್ರ ಆರ್.ಕುಣಚಗಿ ಸೇರಿದಂತೆ ಅನೇಕರು ಉಪಸ್ಸಿತರಿದು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…