ಬಿಸಿ ಬಿಸಿ ಸುದ್ದಿ

ಸರಕಾರಿ ಇಲಾಖೆಗಳಲ್ಲಿ ಹೆಸರು ದಾಖಲಿಸುವಾಗ ಯಡವಟ್ಟು; ಸರಿಪಡಿಸಲು ಮುಸ್ತಫಾ ಆಗ್ರಹ

ಯಾದಗಿರಿ: ಜಿಲ್ಲೆಯ ವಿವಿಧ ಇಲಾಖೆಯ ಕಚೇರಿಗಳಲ್ಲಿ ನಾಗರಿಕರು ಬಂದು ನೀಡುವ ಆಧಾರ ಕಾರ್ಡ ಇಲ್ಲವೇ ಸಂಬಂಧಿಸಿದ ವಿವಿಧ ದಾಖಲೆಗಳಲ್ಲಿ ಇರುವಂತೆ ಹೆಸರು ಇನ್ನಿತರ ವಿವರಗಳನ್ನು ಕಂಪೂಟರ್ ಆಪರೇಟರ್ ಗಳು ದಾಖಲಿಸದೇ ತಮಗೆ ಮನಸ್ಸಿಗೆ ಬಂದಂತೆ ದಾಖಲಿಸುತ್ತಿರುವುದರಿಂದ ತೊಂದರೆ ಆಗುತ್ತಿರುವುದನ್ನು ಸರಿಪಡಿಸುವಂತೆ ಸಮಾಜಿಕ ಕಾರ್ಯಕರ್ತ ಮುಸ್ತಫಾ ಪಟೇಲ್ ಮನವಿ ಮಾಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು, ಜಿಲ್ಲೆಯ ವಿವಿಧ ಇಲಾಖೆಯ ಕಚೇರಿಗಳಲ್ಲಿ ನಾಗರಿಕರು ತಮ್ಮ ಕೆಲಸ ಕಾರ್ಯಗಳಿಗೆ ಬಂದು ತಮ್ಮ ವೈಯಕ್ತಿಕ ವಿವರಗಳನ್ನು ನೀಡುವ ಆಧಾರ ಕಾರ್ಡ, ರೇಷನ್ ಕಾರ್ಡ, ಪಹಾಣಿ ಇಲ್ಲವೇ ಸಂಬಂಧಿಸಿದ ಪೂರಕ ದಾಖಲೆಗಳಲ್ಲಿ ಇರುವಂತೆ ಹೆಸರು ಇನ್ನಿತರ ವಿವರಗಳನ್ನು ಕಂಪೂಟರ್ ಆಪರೇಟರ್ ಗಳು ದಾಖಲಿಸದೇ ತಮಗೆ ಮನಸ್ಸಿಗೆ ಬಂದಂತೆ ದಾಖಲಿಸುತ್ತಿರುವುದರಿಂದ ನಾಗರಿಕರಿಗೆ ತೀವ್ರ ತೊಂದರೆಯಾಗುತ್ತಿದೆ.

ಅದರಲ್ಲೂ ಅನಕ್ಷರಸ್ಥ, ಗ್ರಾಮೀಣ ಮತ್ತು ಭಾಷಾ ಅಲ್ಪಸಂಖ್ಯಾತರೆ ಹೆಚ್ಚು ಇರುವ ಈ ಜಿಲ್ಲೆಯಲ್ಲಿ ಕಂಪುಟರ್ ಆಪರೇಟರ್ ಗಳು ಮಾಡುತ್ತಿರುವ ಯಡವಟ್ಟಿನಿಂದಾಗಿ ಇನ್ನಿಲ್ಲದ ಸಮಸ್ಯೆಗಳು ಆಗುತ್ತಿರುವುದನ್ನು ತಾವು ಮನಗಂಡು ಇದನ್ನು ಸರಿಪಡಿಸುವಂತೆ ಅವರು ಮನವಿ ಮಾಡಿದ್ದಾರೆ.
ಹೆಚ್ಚುವರಿ ಜಿಲ್ಲಾದಿಕಾರಿಗಳು ಮನವಿ ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎಂದು ಮುಸ್ತಫಾ ಪಟೇಲ್ ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago