ಕಲಬುರಗಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಕಚೇರಿಯನ್ನು ಕಲಬುರಗಿಯಲ್ಲೇ ಉಳಿಸಿಕೊಳ್ಳುವಂತೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.
ಈಕುರಿತು ಡಿಸಿಎಂ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಗೋವಿಂದ ಕಾರಜೋಳ ಅವರಿಗೆ ಪತ್ರ ಬರೆದಿರುವ ಶಾಸಕರು,ತಾವು ಈ ಹಿಂದಿನ ಕೆಡಿಪಿ ಸಭೆಯಲ್ಲಿ ಸದರಿ ಕಚೇರಿಯನ್ನು ಯಾವ ಕಾರಣಕ್ಕೂ ಬೆಳಗಾವಿಗೆ ಸ್ಥಳಾಂತರವಾಗಲು ಬಿಡುವುದಿಲ್ಲ ಅದನ್ನು ಕಲಬುರಗಿ ಯಲ್ಲೇ ಉಳಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದೀರಿ. ಆದರೆ, ಇಲ್ಲಿಯವರೆಗೂ ಸ್ಥಳಾಂತರ ಮಾಡಿರುವ ಆದೇಶ ರದ್ದಾಗಿಲ್ಲ.ಬದಲಿಗೆ, ಸ್ಥಳಾಂತರ ಪ್ರಕ್ರಿಯೆ ನಡೆಯುತ್ತಿದೆ ಎನ್ನುವ ಮಾಹಿತಿ ಇದೆ ಎಂದು ಶಾಸಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಾಧಿಕಾರದ ಕಚೇರಿ ಕಲಬುರಗಿ ಯಲ್ಲೇ ಇದ್ದರೆ, ಕಕ ವಿಭಾಗದ ಆರಯ ಜಿಲ್ಲೆಗಳಿಂದ ಸಂಗ್ರಹವಾಗುವ ಆಹಾರದ ಮಾದರಿಗಳನ್ನು ಪರೀಕ್ಷಿಸಿ ತಕ್ಷಣ ಕ್ರಮವಹಿಸಲು ಸಹಕಾರಿಯಾಗುತ್ತದೆ. ಹೀಗಿರುವಾಗ ಸ್ಥಳಾಂತರ ಪ್ರಕ್ರೀಯೆ ಮುಂದುವರೆಸಿದರೆ ಪದೇ ಪದೇ ಅನ್ಯಾಯಕ್ಕೊಳಗಾಗುತ್ತಿರುವ ಕಲಬುರಗಿ ಜಿಲ್ಲೆಗೆ ಮತ್ತೊಂದು ಘೋರ ಅನ್ಯಾಯವೆಸಗಿದಂತಾಗುತ್ತದೆ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ಸ್ಥಳಾಂತರ ಆದೇಶವನ್ನು ರದ್ದುಗೊಳಿಸಿ ಪ್ರಾಧಿಕಾರದ ಕಚೇರಿಯನ್ನು ಕಲಬುರಗಿ ಯಲ್ಲೇ ಉಳಿಸಿಕೊಳ್ಳಲು ಬೇಕಾಗುವ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…