ರಾಯಚೂರು: 2018ರ ಹಣಕಾಸು ವರ್ಷದಲ್ಲಿ ಶಿಕ್ಷಣ, ಆರೋಗ್ಯ ಒಳಗೊಂಡಂತೆ 42 ಸೆಸ್ ಗಳನ್ನು ಜಡಿದ ಮೋದಿ ಸರಕಾರ ಆ ಮೂಲಕ 2.5 ಲಕ್ಷ ಕೋಟಿಯನ್ನು ಸಂಗ್ರಹ ಮಾಡಿತ್ತು. ಆದರೆ ಆ ಮೊತ್ತವನ್ನು ಮರಳಿ ಸಂಬಂದಪಟ್ಟ ಇಲಾಖೆಗಳ ಅಭಿವೃದ್ದಿಗೆ ವೆಚ್ಚ ಮಾಡದೆ. ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷರಾದ ರಮೇಶ ವೀರಾಪೂರು ಟೀಕಿಸಿದ್ದಾರೆ.
‘ಯುಜಿಸಿ’ ರದ್ದುಗೊಳಿಸಿ ‘ಉನ್ನತ ಶಿಕ್ಷಣ ಆಯೋಗ’ (HEC) ರಚಿಸಲು ಈ ವರ್ಷ ಚಾಲನೆ. ಶಿಕ್ಷಣದ ಕೇಂದ್ರೀಕರಣಕ್ಕೂ ಚಾಲನೆ. ಇನ್ನು ವಿಶ್ವ ವಿದ್ಯಾಲಯಗಳ ಧನ ಸಹಾಯ ಮತ್ತು ಅನುದಾನವು ನೇರವಾಗಿ ಕೇಂದ್ರ ಶಿಕ್ಷಣ ಇಲಾಖೆಯ ಸುಪರ್ದಿಗೆ ಹೋಗುತ್ತದೆ. ಮುಂದಿನ 6 ವರ್ಶಗಳಲ್ಲಿ ದಲಿತ ಸಮುದಾಯದ ವಿದ್ಯಾರ್ಥಿಗಳಿಗಾಗಿ 35,219 ಕೋಟಿ ಹಣ ವೆಚ್ಚ ಮಾಡಲಾಗುವುದು ಎಂದು ಬಜೆಟ್ ಘೋಷಣೆ ಮಾಡಿದ್ದಾರೆ.
ಇದು ಎಂತಹ ವಂಚನೆ, ಮೋಸವೆಂದರೆ ಮೊದಲಿಗೆ ಇದು 1944ರಿಂದ ಜಾರಿಯಲ್ಲಿರುವ ಪ.ಜಾತಿ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆ. ಇದರಲ್ಲಿ ಹೊಸದೇನೂ ಇಲ್ಲ ದೇಶದಾದ್ಯಂತ ಸುಮಾರು 57 ಲಕ್ಷ ಪ.ಜಾತಿ ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಿದರೆ ಒಬ್ಬ ವಿದ್ಯಾರ್ಥಿಗೆ ಪ್ರತಿ ವರ್ಷ 10,000 ರೂ, ಪ್ರತಿ ತಿಂಗಳು 858 ರೂ. ದೊರಕುತ್ತದೆ. ಈ ಕೇವಲ ಹಣದಿಂದ ಆ ವಿದ್ಯಾರ್ಥಿಗೆ ಯಾವ ಆರ್ಥಿಕ ಅನುಕೂಲವೂ ದೊರಕುವುದಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯಗಳು 60:40 ಅನುಪಾತದಲ್ಲಿ ಕೊಡಬೇಕು. ರಾಜ್ಯ ಎಂದಿಗೂ ಕೊಡುವುದಿಲ್ಲ, ಹಾಗಾಗಿ ಕೇಂದ್ರವೂ ಕೊಡುವುದಿಲ್ಲ. ಇದು ಬಡ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚನೆ ಮಾಡುವ ಶಿಕ್ಷಣ ವಿರೋಧಿ ಬಜೆಟ್ ಆಗಿದೆ ಎಂದು ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ.
ದೇಶದ ಸಮಗ್ರ ಶಿಕ್ಷಣ ಅಭಿವೃದ್ಧಿಗಾಗಿ ಕೇಂದ್ರ ಬಜೆಟ್ ನಲ್ಲಿ ಕನಿಷ್ಠ 10% ಮೀಸಲಿಡಬೇಕು ಎಂಬ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡದಿರುವುದು ಅನಿರೀಕ್ಷಿತವೇನಲ್ಲ. ದುಡ್ಡಿದ್ದವರಿಗೆ ಶಿಕ್ಷಣವನ್ನು ಮಾರಾಟ ಮಾಡುವ ಶಿಕ್ಷಣದ ಖಾಸಗೀಕರಣ ಕೇಂದ್ರೀಕರಣ ತೀವ್ರಗೊಳಿಸುವ ಉದ್ದೇಶಗಳು ಎದ್ದು ಕಾಣುತ್ತಿವೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…