ಖಜೂರಿ ಗ್ರಾ.ಪಂ ಬಿಜೆಪಿ ಬೆಂಬಲಿತರ ತೆಕ್ಕೆಗೆ

0
37

ಆಳಂದ: ತಾಲೂಕಿನ ಖಜೂರಿ ಗ್ರಾಮ ಪಂಚಾಯತಿಯ ಮೊದಲ ಅವಧಿಯ 30 ತಿಂಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬುಧುವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಬೆಂಬಲಿತ ವಾರ್ಡ ನಂ 1ರಿಂದ ಆಯ್ಕೆಯಾದ ಮಂಜುನಾಥ ಬಂಗರಗೆ ಅಧ್ಯಕ್ಷರಾಗಿ, ವಾರ್ಡ ನಂ 2ರಿಂದ ಆಯ್ಕೆಯಾದ ಸೋನಾಬಾಯಿ ಗುರುಬಸಪ್ಪ ಹುಲ್ಲೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

Contact Your\'s Advertisement; 9902492681

ಗ್ರಾಮ ಪಂಚಾಯತ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಬಂಗರಗೆ, ಉಪಾಧ್ಯಕ್ಷ ಸ್ಥಾನಕ್ಕೆ ಸೋನಾಬಾಯಿ ಗುರುಬಸಪ್ಪ ಹುಲ್ಲೆ ನಾಮಪತ್ರ ಸಲ್ಲಿಸಿದ್ದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಖಜೂರಿ ಜಿಲ್ಲಾ ಪಂಚಾಯತ ಸದಸ್ಯ ಹರ್ಷಾನಂದ ಗುತ್ತೇದಾರ ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು. ಚುನಾವಣಾಧಿಕಾರಿಯಾಗಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಾರ್ಯನಿರ್ವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here