ಬಿಸಿ ಬಿಸಿ ಸುದ್ದಿ

ಇ.ಡಿ.ಸಿ ಯಂತ್ರದ ಮೂಲಕ ಕಂದಾಯ ಪಾವತಿ ವ್ಯವಸ್ಥೆ: ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಯ ಕರ ವಸೂಲಾತಿಯನ್ನು ಮತ್ತಷ್ಟು ಸರಳೀಕರಣ ಮಾಡಲು ಎಲೆಕ್ಟ್ರಾನಿಕ್ ಡೇಟಾ ಮಷಿನ್ ಸಾಫ್ಟವೇರ್ ಪರಿಚಯಿಸಲಾಗಿದ್ದು, ಮನೆ ಮನೆಗೆ ತೆರಳಿ ಸ್ಥಳದಲ್ಲಿಯೆ ಕಂದಾಯ ಹಣ ಪಾವತಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತೆ ಬಿ.ಫೌಜಿಯಾ ತರನ್ನುಮ್ ಹೇಳಿದ್ದರು.

ಮಂಗಳವಾರ ಮಹಾನಗರ ಪಾಲಿಕೆಯ ನೂತನ ಕಟ್ಟಡದಲ್ಲಿ ಇ.ಡಿ.ಸಿ ಯಂತ್ರದ ಡೆಮೋ ಉದ್ಘಾಟಿಸಿ ಮಾತನಾಡಿ ಅವನ್ನು ಮುಂದೆ ಎಲೆಕ್ಟ್ರಾನಿಕ್ ಡೇಟಾ ಮಷಿನ್ ಮುಖಾಂತರ ಕಂದಾಯ ವಸೂಲಾತಿ ಪಡೆಯಲಾಗುವುದು. ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಬ್ಯಾಂಕ್ ಚೆಕ್ ಅಥವಾ ಡಿ.ಡಿ. ಮುಖಾಂತರ ಕಂದಾಯ ಬಿಲ್ಲುಗಳನ್ನು ಪಾವತಿ ಮಾಡಬಹುದಾಗಿದೆ. ಪ್ರಾಯೋಗಿಕವಾಗಿ ಪಾಲಿಕೆ ವ್ಯಾಪ್ತಿಯ ೫ ವಾರ್ಡ್‌ಗಳಲ್ಲಿ ಆರಂಭದಲ್ಲಿ ಇದು ಜಾರಿಗೆ ತರಲಾಗುತ್ತಿದೆ. ತದನಂತರ ಸಾಧಕ-ಬಾಧಕಗಳನ್ನು ಅವಲೋಕಿಸಿ ಮುಂದಿನ ದಿನಗಳಲ್ಲಿ ಉಳಿದ ಎಲ್ಲಾ ೫೫ ವಾರ್ಡ್‌ಗಳಲ್ಲಿ ಆಸ್ತಿ ಪಾವತಿಗೆ ಇ.ಡಿ.ಸಿ ಯಂತ್ರ ಬಳಸಲಾಗುವುದು. ಇದಲ್ಲದೆ ಆನ್‌ಲೈನ್ ಮೂಲಕವು ಸಹ ಕರ ಪಾವತಿ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆದಿದೆ ಎಂದರು.

ಈ ವ್ಯವಸ್ಥೆಯಿಂದ ಸಾರ್ವಜನಿಕರು ಮಹಾನಗರ ಪಾಲಿಕೆ ಕಛೇರಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಆಸ್ತಿ ತೆರೆಗೆಯನ್ನು ಕಟ್ಟುವುದು ತಪ್ಪುವುದಲ್ಲದೆ ಸಮಯದ ಉಳಿತಾಯವು ಆಗಲಿದೆ. ನೂತನ ವ್ಯವಸ್ಥೆ ಜಾರಿಗೆ ಸೆಮಿನರ್ ಕಂಪನಿ, ಎಚ್.ಡಿ.ಎಫ್.ಸಿ ಬ್ಯಾಂಕ್ ಪಾಲಿಕೆಯೊಂದಿಗೆ ಕೈಜೋಡಿಸಿದೆ. ಸಾರ್ವಜನಿಕರು ಈ ನೂತನ ವ್ಯವಸ್ಥೆ ಜಾರಿಗೆ ಪಾಲಿಕೆಯೊಂದಿಗೆ ಸಹಕರಿಸಬೇಕು. ಪ್ರತಿ ವಾರ್ಡ್‌ಗೆ ಓರ್ವ ಬಿಲ್ ಕಲೆಕ್ಟರ್‌ರಗಳಿದ್ದು, ಪ್ರಸ್ತುತ ೪೦ ಇ.ಡಿ.ಸಿ ಮಷಿನ್ ಪಾಲಿಕೆ ಹೊಂದಿದೆ ಎಂದರು.

ಈ ಸಂದರ್ಭದಲ್ಲಿ ಹೆಚ್‌ಡಿಎಫ್‌ಸಿ ಬ್ಯಾಂಕಿನ ವ್ಯವಸ್ಥಾಪಕ ಶಿವಶಂಕರ ಸೇರಿದಂತೆ ಪಾಲಿಕೆಯ ಅಧಿಕಾರಿಗಳು-ಸಿಬ್ಬಂದಿಗಳು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago