ನಿಂಬಾಳ ಗ್ರಾ.ಪಂ ಬಿಜೆಪಿ ಬೆಂಬಲಿತರ ವಿಜಯ

0
57

ಆಳಂದ: ತಾಲೂಕಿನ ನಿಂಬಾಳ ಗ್ರಾಮ ಪಂಚಾಯತಿಯ ಮೊದಲ ಅವಧಿಯ 30 ತಿಂಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ.
ಗುರುವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಬೆಂಬಲಿತ ಯಲ್ಲಾಬಾಯಿ ಮಲ್ಕಣ್ಣ ಹಾವಳೆ ಅಧ್ಯಕ್ಷರಾಗಿ, ಕುಮಾರಗೌಡ ಪಾಟೀಲ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಗ್ರಾಮ ಪಂಚಾಯತ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಲ್ಲಾಬಾಯಿ ಹಾವಳೆ, ಸುಜಾತಾ ಹೋಳಕೇರಿ ಉಪಾಧ್ಯಕ್ಷ ಸ್ಥಾನಕ್ಕೆ ಕುಮಾರಗೌಡ ಪಾಟೀಲ, ವೀರಪಾಕ್ಷಯ್ಯ ಹಿರೇಮಠ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ತಲಾ 8 ಮತಗಳನ್ನು ಪಡೆಯುವುದರ ಮೂಲಕ ತಮ್ಮ ಪ್ರತಿಸ್ಪರ್ಧಿಗಳನ್ನು 1 ಮತದ ಅಂತರದಿಂದ ಪರಾಭವಗೊಳಿಸಿದರು.

Contact Your\'s Advertisement; 9902492681

ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಮಾದನ ಹಿಪ್ಪರ್ಗಾ ಜಿಲ್ಲಾ ಪಂಚಾಯತ ಸದಸ್ಯ ಗುರುಶಾಂತ ಪಾಟೀಲ ನಿಂಬಾಳ ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here