ಮುನ್ನಹಳ್ಳಿ ಗ್ರಾ.ಪಂ ಬಿಜೆಪಿ ಬೆಂಬಲಿತರ ಗೆಲುವು

0
59

ಆಳಂದ: ತಾಲೂಕಿನ ಮುನ್ನಹಳ್ಳಿ ಗ್ರಾಮ ಪಂಚಾಯತಿಯ ಮೊದಲ ಅವಧಿಯ 30 ತಿಂಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಬೆಂಬಲಿತ ಅಂಬಾಬಾಯಿ ಕುಪ್ಪಣ್ಣ ಅಧ್ಯಕ್ಷರಾಗಿ, ರಾಜಕುಮಾರ ಚವ್ಹಾಣ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮ ಪಂಚಾಯತ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅಂಬಾಬಾಯಿ ಕುಪ್ಪಣ್ಣ, ಉಪಾಧ್ಯಕ್ಷ ಸ್ಥಾನಕ್ಕೆ ರಾಜಕುಮಾರ ಚವ್ಹಾಣ ನಾಮಪತ್ರ ಸಲ್ಲಿಸಿದ್ದರು.

Contact Your\'s Advertisement; 9902492681

ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು ಜಿಲ್ಲಾ ಪಂಚಾಯತ ಸದಸ್ಯ ಹóರ್ಷಾನಂದ ಗುತ್ತೇದಾರ ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here