ಸುರಪುರ: ಕಳೆದ ಜನೆವರಿ ೧೧ನೇ ತಾರೀಖು ನಡೆದ ಯಾದಗಿರಿ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಫಲಿತಾಂಶ ಹೊರಬಂದಿದ್ದು ಯುವ ಮುಖಂಡ ರಾಜಾ ಕುಮಾರ ನಾಯಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆ ಮುಗಿದ ನಂತರ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದ ಜಿಲ್ಲೆಯ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಫಲಿತಾಂಶ ಹೊರ ಬರುತ್ತಿದ್ದಂತೆ ಹರ್ಷಗೊಂಡರು.ಜಿಲ್ಲಾ ಅಧ್ಯಕ್ಷಸ್ಥಾನದ ಆಕಾಂಕ್ಷಿಗಳಾಗಿ ಚುನಾವಣಾ ಕಣದಲ್ಲಿದ್ದ ರಾಜಾ ಕುಮಾರ ನಾಯಕ ಅವರು ೧೩೯೩ ಮತಗಳನ್ನು ಪಡೆದು ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡಿದ್ಧಾರೆ.ಅಲ್ಲದೆ ಉಪಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಸಾಹುಕಾರ್ ಅವರು ೫೭ ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ರಾಜಾ ಕುಮಾರ ನಾಯಕ ಅವರು ಯೂತ್ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿದ್ದಕ್ಕಾಗಿ ತಾಲೂಕಿನ ಯೂತ್ ಕಾಂಗ್ರೆಸ್ ಮುಖಂಡರು ಹಾಗು ಕಾರ್ಯಕರ್ತರು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿದರು.ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಗುಲಾಲು ಎರಚಿ ಸಿಹಿ ಹಂಚಿ ಸಂಭ್ರಮಾಚರಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ರಾಜಾ ವಿಜಯಕುಮಾರ ನಾಯಕ ಕನಕಾಚಲ ಯಡಿಯಾಪುರ ಸೇರಿದಂತೆ ಅನೇಕ ಜನರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…