ಕಲಬುರಗಿ: ನಗರದ ಖಾಜಾ ಬಂದಾ ನವಾಜ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರಿಗೆ ಹಾಗೂ ಸಿಬ್ಬಂದಿಗಳಿಗೆ ಕಳೆದ ೧೦ ತಿಂಗಳಿಂದ ವೇತನ ಬಂದಿಲ್ಲದಿರುವುದನ್ನು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಬೆಂಬಲಿತವಾಗಿರುವ ಇಂಜಿನಿಯರಿಂಗ್ ಕಾಲೇಜ್ ಫ್ಯಾಕಲ್ಟಿಸ್ ಅಸೋಸಿಯೇಷನ್ ಕಳವಳ ವ್ಯಕ್ತಪಡಿಸಿ, 30 ವರ್ಷದಿಂದ ಕೆಲಸ ಮಾಡುತ್ತಿರುವ ಹಿರಿಯ ಉಪನ್ಯಾಸಕರು, ಲ್ಯಾಬ್ ಅಸಿಸ್ಟೆಂಟ್ಸ್ ಹಾಗೂ ಇತರೆ ಸಿಬ್ಬಂದಿಗಳು ಜೀವನ ನಡೆಸುವುದು ಕಷ್ಟವಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಸೇರಿದಂತೆ ಆಡಳಿತ ಮಂಡಳಿಗೆ ಮವನಿ ಮಾಡಿ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿದ್ದಾರೆ.
ಕೋವಿಡ್-೧೯ರ ನೆಪವೊಡ್ಡಿ ಇಲ್ಲಿಯವರೆಗೆ ಸಿಬ್ಬಂದಿಗಳಿಗೆ ನ್ಯಾಯಯುತವಾಗಿ ತಿಂಗಳಿಗೆ ದೊರಕಬೇಕಾದ ಸಂಬಳವನ್ನು ನೀಡದಿರುವುದನ್ನು ವಿರೋಧಿಸಿ ಅಲ್ಲಿನ ಸಿಬ್ಬಂದಿಗಳು ಪದೇ ಪದೇ ಪ್ರಾಂಶುಪಾಲರು, ಡೀನ್ ಹಾಗೂ ಮ್ಯಾನೆಜ್‌ಮೆಂಟ್‌ರವರ ಗಮನಕ್ಕೆ ತಂದಿದ್ದರು ಸಂಬಳವನ್ನು ನೀಡುತ್ತಿಲ್ಲ. ಕಳೆದ ಎರಡು ವಾರಗಳಿಂದ ಉಪನ್ಯಾಸಕರು, ಪ್ರಾಧ್ಯಾಪಕರು ಕಾಲೇಜಿನಲ್ಲಿ ಸಂಬಳಕ್ಕಾಗಿ ಮನವಿ ಪತ್ರ, ಧರಣಿ, ಪ್ರತಿಭಟನೆ ಮಾಡಿದರೂ ಇಂದಿಗೂ ಸಂಬಳವನ್ನು ನೀಡದಿರುವುದು ಅಮಾನವೀಯವಾದುದಾಗಿದ್ದು, ಎಷ್ಟೋ ಸಿಬ್ಬಂದಿಗಳ ಜೀವನವು ಸಂಕಷ್ಟಕ್ಕೀಡಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಸಂಘಟನೆಯ ವತಿಯಿಂದ ಕಾಲೇಜಿನ ಪ್ರಾಂಶುಪಾಲರು, ಕೆ.ಬಿ.ಎನ್. ವಿಶ್ವವಿದ್ಯಾಲಯದ ಉಪಕುಲಪತಿಗಳು, ಡೀನ್‌ರನ್ನು ಭೇಟಿಯಾಗಿ ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಲಾಗಿದೆ. ಹಾಗೂ ಇಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರೀಜಿನಲ್ ಆಫೀಸರ್ ಡಾ.ಬಸವರಾಜ ಗಾದಗೆ ಅವರನ್ನು ಭೇಟಿಯಾಗಿ ಸಮಸ್ಯೆಯನ್ನು ಪರಿಹರಿಸುವಂತೆ ಒತ್ತಾಯಿಸಲಾಯಿತು.
ಸಂಘಟನೆಯ ಸಂಚಾಲಕ ವೀರಭದ್ರಪ್ಪ ಆರ್.ಕೆ, ಪ್ರಾಧ್ಯಾಪಕರಾದ ಡಾ. ವಿಶಾಲ ದತ್ತ, ಡಾ. ಮಜರ್ ಹುಸೇನ್, ಜಮರುದ್ಧ ತಾಜ್, ಮಹಮ್ಮದ್, ಮೊಹ್ಮದ್ ಮನ್ಸೂರ್ ಅಹಮದ್ ಹಾಗೂ ಇಂಜಿನಿಯರಿಂಗ್ ಕಾಲೇಜ್‌ಸ್ ಫ್ಯಾಕಲ್ಟಿಸ್ ಅಸೋಸಿಯೇಷನ್ ಪ್ರತಿನಿಧಿಯಾದ ಅಶ್ವಿನಿಯವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…