ಬಿಸಿ ಬಿಸಿ ಸುದ್ದಿ

ವಿವಿಧ ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ SFI ಪ್ರತಿಭಟನೆ

ಬೆಂಗಳೂರು : ವಿವಿಧ ಶೈಕ್ಷಣಿಕ  ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ SFI ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದ ವಿದ್ಯಾರ್ಥಿ ಸಮುದಾಯ ಹಲವಾರು ಶೈಕ್ಷಣಿಕ ಸಮಸ್ಯೆಗಳನ್ನು ಎದುರಿಸುತ್ತಿದೆ. ವಿದ್ಯಾರ್ಥಿ ಸಂಘಟನೆಗಳು ರಾಜ್ಯದೆಲ್ಲೆಡೆ ಹಲವು ಶೈಕ್ಷಣಿಕ ಬೇಡಿಕೆಗಳಿಗಾಗಿ ಆರಂಭದಿಂದಲೂ ನಿರಂತರವಾಗಿ ಹೋರಾಟ ಮಾಡತ್ತಾ ಬಂದಿದ್ದರೂ ಆಳುವ ಸರ್ಕಾರಗಳು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕುವ ಕೆಲಸ ಇಲ್ಲಿಯ ವರೆಗೆ ಮಾಡಿಲ್ಲ ಎಂದು ವಿದ್ಯಾರ್ಥಿಗಲು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಪ್ರತಿಷ್ಠಿತ ಕನ್ನಡ ವಿಶ್ವವಿದ್ಯಾಲಯ, ನೂತನ ರಾಯಚೂರು ವಿಶ್ವವಿದ್ಯಾಲಯ ಸೇರಿದಂತೆ ಯಾವ ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ ಹಣ ನೀಡಿಲ್ಲ,  ಬಸ್ ಪಾಸ್ , ಹಾಸ್ಟೆಲ್, ಶಿಕ್ಷಕ – ಉಪನ್ಯಾಸಕರ ನೇಮಕಾತಿ, ವಿದ್ಯಾರ್ಥಿ ವೇತನ, ಸಾರಿಗೆ ವ್ಯವಸ್ಥೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ರಾಜ್ಯದ ವಿದ್ಯಾರ್ಥಿ ಸಮುದಾಯ ಅನುಭವಿಸುತ್ತಿದೆ ಇದರ ಬಗ್ಗೆ ರಾಜ್ಯ ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆಗಳು ಪರಿಹಾರವನ್ನು ಕಂಡುಕೊಳ್ಳಲು ಸೋತಿವೆ ಎಂದರು.

ಆನ್ ಲೈನ್ ತರಗತಿ ನಡೆದಿವೆ ಎನ್ನುವ ಕಾರಣ ನೀಡಿ, ಪ್ರಾಕ್ಟಿಕಲ್ ತರಗತಿಗಳು ಇಲ್ಲದೆಯೂ ಪರೀಕ್ಷೆಗಳನ್ನು ನಡೆಸುವ ಕೆಲಸಕ್ಕೆ ಸರ್ಕಾರ ಮತ್ತು ವಿವಿ ಗಳು ಮುಂದಾಗಿವೆ. ಆನ್ಲೈನ್ ತರಗತಿಗಳಿಂದ ವಂಚಿತರಾದ ವಿದ್ಯಾರ್ಥಿಗಳು ಈಗ ಪರೀಕ್ಷೆ ಗಳನ್ನು ಹೇಗೆ ತಾನೇ ಎದುರಿಸಲು ಹೇಗೆ ಸಾಧ್ಯ ಎಂದು ದೂರಿದರು‌.

ಜೊತೆಗೆ ವಿದ್ಯಾರ್ಥಿ ವಿರೋಧಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯನ್ನು ಕೈಬಿಡಬೇಡು ಹಾಗೂ ಕೇಂದ್ರ ಬಜೆಟ್  ಶಿಕ್ಷಣದ ಖಾಸಗಿಕರಣ ಕೇಂದ್ರೀಕರಣವನ್ನು ತೀವ್ರ ಗೊಳಿಸುವ ಈ ಬಜೆಟ್ ವಿದ್ಯಾರ್ಥಿ ವಿರೋಧಿ ಬಜೆಟ್ ಆಗಿದೆ  ಮತ್ತು ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 30% JDP 6% ಅನುದಾನವನ್ನು ನೀಡಬೇಕೆಂದು ಹಾಗೂ ರಾಜ್ಯದ ಎಲ್ಲಾ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿ ಪೋಸ್ಟರ್ ಪ್ರದರ್ಶನದ ಮೂಲಕ ಪ್ರತಿಭಟನೆಯನ್ನು ಮಾಡಲಾಯಿತು.

ಈ ಪ್ರತಿಭಟನೆಯನ್ನು ಉದ್ದೇಶಿಸಿ SFI ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ಕಾರ್ಯದರ್ಶಿ ವಾಸುದೇವ ರೆಡ್ಡಿ, ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿದರು.

ಈ ಸಂಧರ್ಭದಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಾಳ, ಗಾಯಿತ್ರಿ, ಬೆಂಗಳೂರು ಜಿಲ್ಲಾ ಅಧ್ಯಕ್ಷರಾದ ಅಂಜಿ, ಜಿಲ್ಲಾ ಕಾರ್ಯದರ್ಶಿ ದಿಲೀಪ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಜ್ವಲ್ ಪ್ರಕಾಶ್, ಸಾಗರ್ ಕೂಡಗಿ, ಮುಖಂಡರಾದ ಮಾದೇಶ, ಯಶಸ್, ಐಶ್ವರ್ಯ ಸೇರಿ ಅನೇಕರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago