ಬಿಸಿ ಬಿಸಿ ಸುದ್ದಿ

ಪ್ರೇಮಿಗಳ ದಿನಕ್ಕಾಗಿ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಕರಕುಶಲ ವಸ್ತು ಪ್ರದರ್ಶನ ಮೇಳಕ್ಕೆ ಚಾಲನೆ

ಬೆಂಗಳೂರು: ಪ್ರೇಮಿಗಳ ಹಬ್ಬ – ವ್ಯಾಲಂಟೈನ್ಸ್‌ ಡೇಯನ್ನು ಮತ್ತಷ್ಟು ವಿಶೇಷ ಗೊಳಿಸುವ ಉದ್ದೇಶದಿಂದ ನಗರದ ಹೃದಯಭಾಗದಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ದ ಸೋಕ್‌ ಮಾರ್ಕೇಟ್‌ ಗೆ ಇಂದು ನಟಿ ರಿಷಿಕಾ ಶರ್ಮಾ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಫೆಬ್ರವರಿ 14 – ವ್ಯಾಲಂಟೈನ್‌ ಡೇ – ಪ್ರೇಮಿಗಳ ದಿನಕ್ಕೆ ಅದರದೇ ಆದ ವಿಶೇಷತೆ ಇದೆ. ತಮ್ಮ ಸಂಗಾತಿಗೆ ವಿಶೇಷವಾದ ಕೊಡುಗೆಯನ್ನು ಕೊಡುವ ಮೂಲಕ ಬಹುತೇಕ ಪ್ರೇಮಿಗಳು ಇದನ್ನು ಆಚರಿಸುತ್ತಾರೆ. ಸಂಗಾತಿಗೆ ವಿಶಿಷ್ಟವಾದ ಕೊಡುಗೆಯನ್ನು ಆಯ್ಕೆ ಮಾಡುವ ಅವಕಾಶವನ್ನು ನೀಡುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಫೆಬ್ರವರಿ 5 ರಿಂದ 14 ರ ವರೆಗೆ ದ ಸೋಕ್‌ ಮಾರ್ಕೇಟ್‌ – ಆರ್ಟ್‌ ಅಂಡ್‌ ಕ್ರಾಫ್ಟ್‌ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಕರಕುಶಲ ವಸ್ತು ಪ್ರದರ್ಶನ ಹಾಗೂ ಮರಾಟ ಮೇಳದ ಆಯೋಜಕ ಅಫ್ತಾಬ್‌ ಮಾತನಾಡಿ, ಚಿತ್ತಾರ – ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ಸಹಯೋಗದಲ್ಲಿ ಆಯೋಜಿಸಿರುವ ಈ ಕರಕುಶಲ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ, ನೂರಕ್ಕೂ ಹೆಚ್ಚು ಸ್ಟಾಲ್‌ಗಳಲ್ಲಿ ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳ ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುಲಿವೆ.

ಫೆಬ್ರವರಿ ೫ ರಿಂದ ಫೆಬ್ರವರಿ ೧೪ ವರೆಗೆ ಈ ಪ್ರದರ್ಶನವು ನಡೆಯಲಿದ್ದು, ಪ್ರತಿದಿನ 11 ರಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ಮತ್ತು ಮಾರಾಟ ಮೇಳ ಇರಲಿದೆ ಎಂದು ಹೇಳಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago