ಶಹಾಬಾದ:ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾಮ ಪಂಚಾಯತ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ನೂತನ ಗ್ರಾಪಂ ಅಧ್ಯಕ್ಷರಾಗಿ ಸುಶ್ಮಾ ಮರಲಿಂಗ ಗಂಗಭೋ ಮತ್ತು ಉಪಾಧ್ಯಕ್ಷರಾಗಿ ರೇಶ್ಮಾ ಮಲ್ಲಿನಾಥ ಕರಣಿಕ್ ಆಯ್ಕೆಯಾದರು.
ಸಾಮನ್ಯ ವರ್ಗಕ್ಕೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ಸುಶ್ಮಾ ಮರಲಿಂಗ ಮತ್ತು ಬೆಳ್ಳಪ್ಪ ಅರ್ಜುನ ಕಣದಾಳ ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ರೇಶ್ಮಾ ಮಲ್ಲಿನಾಥ ಕರಣಿಕ್ ಮತ್ತು ನಿರ್ಮಲಾ ಶಿವರಾಜ ನಾಮಪತ್ರ ಸಲ್ಲಿಸಿದರು.
ತೊನಸನಹಳ್ಳಿ(ಎಸ್) ಗ್ರಾಪಂಯ ಒಟ್ಟು ೨೨ ಜನ ಸದಸ್ಯ ಬಲದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಲಾ ಇಬ್ಬರಿಗೂ ೧೧ ಮತಗಳು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಲಾ ಇಬ್ಬರಿಗೂ ೧೧ ಮತಗಳನ್ನು ಪಡೆದರು.ಸಮ ಮತ ಪಡೆದಿದ್ದರಿಂದ ಚುನಾವಣಾಧಿಕಾರಿ ಸುರೇಶ ವರ್ಮಾ ಅವರು ಚೀಟಿಯ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿದರು.ಚೀಟಿಯಲ್ಲಿ ಸುಶ್ಮಾ ಮರಲಿಂಗ ಗಂಗಭೋ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ರೇಶ್ಮಾ ಮಲ್ಲಿನಾಥ ಕರಣಿಕ್ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಸುರೇಶ ವರ್ಮಾ ತಿಳಿಸಿದರು.
ಅಧ್ಯಕ್ಷರ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಗ್ರಾಪಂ ಕಾರ್ಯಾಲಯ ಹೊರಗಡೆ ಸೇರಿದ್ದ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಗುಲಾಲ ಎರಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೂತನ ಅಧ್ಯಕ್ಷರಿಗೆ ಹಾರ ಹಾಕಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ವಿಜಯಕುಮಾರ ಮಾಣಿಕ್,ನಿಂಗಣ್ಣ ಹುಳಗೋಳಕರ್,ರವಿ ಸಣತಮ, ರವಿ ರಾಠೋಡ, ದತ್ತಾ ಫಂಡ್, ಮಹಾದೇವ ಬಂದಳ್ಳಿ, ಸಿದ್ದು ಗೊಳೇದ್, ಬಸವರಾಜ ಗೊಳೇದ್, ಹಣಮಂತ ಕೊಂಡಯ್ಯ, ಸಿದ್ರಾಮ ಕರಣಿಕ್,ಚನ್ನಪ್ಪ ಕೋಬಾಳ, ರಾಜೇಶ್ವರಿ.ಆರ್, ರಾಜೇಶ ಯನಗುಂಟಿಕರ್ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…