ಆಳಂದ: ತಾಲೂಕಿನ ಆಳಂಗಾ ಗ್ರಾಮ ಪಂಚಾಯತಿಯ ಮೊದಲ ಅವಧಿಯ 30 ತಿಂಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ.
ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಬೆಂಬಲಿತ ಲಕ್ಷ್ಮೀಬಾಯಿ ರಾಜೇಂದ್ರ ಅವಿರೋಧವಾಗಿ ಅಧ್ಯಕ್ಷರಾಗಿ, ಗೋಕರ್ಣ ರಾಮಚಂದ್ರ ಉಪಾಧ್ಯಕ್ಷರಾಗಿ ಚುನಾವಣೆಯ ಮೂಲಕ ಆಯ್ಕೆಯಾದರು.
ಗ್ರಾಮ ಪಂಚಾಯತ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀಬಾಯಿ ರಾಜೇಂದ್ರ, ಸಖಾರಾಮ ಕಾಂಬಳೆ, ಉಪಾಧ್ಯಕ್ಷ ಸ್ಥಾನಕ್ಕೆ ಗೋಕರ್ಣ ರಾಮಚಂದ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಲಕ್ಷ್ಮೀಬಾಯಿ ರಾಜೇಂದ್ರ 8 ಮತಗಳನ್ನು ಪಡೆದರೇ ಸಖಾರಾಮ ಕಾಂಬಳೆ 4 ಮತಗಳನ್ನು ಪಡೆದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಖಜೂರಿ ಜಿಲ್ಲಾ ಪಂಚಾಯತ ಸದಸ್ಯ ಹರ್ಷಾನಂದ ಗುತ್ತೇದಾರ ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.