ಆಳಂದ: ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮ ಪಂಚಾಯತಿಯ ಮೊದಲ ಅವಧಿಯ 30 ತಿಂಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಬೆಂಬಲಿತ ನಾಗಮ್ಮ ನಾಗಣ್ಣ ಮೂಲಗೆ ಅಧ್ಯಕ್ಷರಾಗಿ, ಲಲಿತಾ ಗುರುಬಸಪ್ಪ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಗ್ರಾಮ ಪಂಚಾಯತ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಗಮ್ಮಾ ನಾಗಣ್ಣ ಮೂಲಗೆ, ಉಪಾಧ್ಯಕ್ಷ ಸ್ಥಾನಕ್ಕೆ ಲಲಿತಾ ಗುರುಬಸಪ್ಪ ನಾಮಪತ್ರ ಸಲ್ಲಿಸಿದ್ದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಖಜೂರಿ ಜಿಲ್ಲಾ ಪಂಚಾಯತ ಸದಸ್ಯ ಹರ್ಷಾನಂದ ಗುತ್ತೇದಾರ ವಿಜಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.