ಕಲಬುರಗಿ: ಒಬ್ಬ ಮನುಷ್ಯ ರಕ್ತ ನೀಡುವುದರಿಂದ ಸುಮಾರು ಮೂರು ಜನರಿಗೆ ಉಪಯೋಗ ವಾಗುವಂತಹ ಯಾವದಾದರು ದಾನ ವಿದ್ದರೆ ಅದು ರಕ್ತದಾನ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಸೊನಾರ ನಂದಪ್ಪ ಡಿ. ಅವರು ನಗರದ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ. ಎಸ್. ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಲಿಂ. ಮಹಾದೇವಪ್ಪ ರಾಂಪೂರೆ ಅವರ ೪೮ನೇ ಪುಣ್ಯತಿಥಿ ನಿಮಿತ್ಯ ಹಮ್ಮಿಕೊಂಡ ರಕ್ತದಾನ ಶಿಬಿರದ ಉದ್ಘಾಟನೆ ಮಾಡಿ ನುಡಿದ್ದರು.
ಮನುಷ್ಯನಿಗೆ ಬೇಕಾಗುವ ಹೃದಯ, ಕಿಡ್ನಿಯಂತಹ ಅಂಗಾಂಗಗಳು ಕೃತಕವಾಗಿ ನಿರ್ಮಾಣ ಮಾಡುವಲ್ಲಿ ವಿಜ್ಞಾನಿಗಳು ಸಫಲತೆಯನ್ನು ಪಡೆದುಕೊಂಡಿದ್ದಾರೆ ಆದರೆ ರಕ್ತ ಮಾತ್ರ ಮನುಷ್ಯ ಮನುಷ್ಯನಿಂದಲೆ ಪಡೆಯಬೇಕು ಎಂದು ನುಡಿದ್ದರು. ಲಿಂ. ಮಹಾದೇವಪ್ಪ ರಾಂಪೂರೆ ಅವರ ಜೀವನದ ಕುರಿತು ನಿವೃತ್ತ ಪ್ರಾಧ್ಯಾಪಕರಾದ ಡಾ. ಎಸ್. ಆರ್. ತಡಕಲ ಅವರು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದ್ದರು.
ರಕ್ತದಾನದ ಮಹತ್ವದ ಕುರಿತು ಮತ್ತು ಅದರಿಂದ ಆಗುವ ಲಾಭಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆ ಕಲಬುರಗಿಯ ಅಧ್ಯಕ್ಷರಾದ ಶ್ರೀ ಅಪ್ಪಾರಾವ ಅಕ್ಕೊಣಿಯವರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್. ಎ. ಪಾಟೀಲರು ವಹಿಸಿದ್ದರು. ಕಾರ್ಯಕ್ರಮದ ಪ್ರಾರ್ಥನಾ ಗೀತೆಯನ್ನು ಕು. ವೈಷ್ಣವಿ, ಕಾರ್ಯಕ್ರಮದ ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನು ಪ್ರೊ. ಜಗದೇವಿ ಹಿರೇಮಠ ಮಾಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಡಾ. ಪ್ರೇಮಚಂದ ಚವ್ಹಾಣ ಮಾಡಿದ್ದರು. ಕಾರ್ಯಕ್ರಮದ ವಂದನಾರ್ಪಣೆಯನ್ನು ಡಾ. ಪ್ರಾಣೇಶ ಎಸ್. ಮಾಡಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಪ್ರಾಧ್ಯಾಪಕರುಗಳಾದ ಡಾ. ಎ. ಜಿ. ಪೋಲಿಸ ಪಾಟೀಲ, ಡಾ. ದೇವಿದಾಸ ಚೆಟ್ಟಿ, ಡಾ. ಮಹೇಶ ಗಂವ್ಹಾರ, ಡಾ. ಪ್ರತಿಭಾ ಸಂಗಾಪೂರೆ, ಡಾ. ಸುನಿತಾ ಚಿನ್ಮಳ್ಳಿ, ಶ್ರೀ ಶಂಕ್ರಪ್ಪ ಕಲಬುರಗಿ, ಇನ್ನೂ ಹಲವಾರು ಪ್ರಾಧ್ಯಾಪಕರು, ಉಪನ್ಯಾಸಕರು, ಬೋಧಕೇತ್ತರ ಸಿಬ್ಬಂಧಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…