ಕಲಬುರಗಿ: ನಾಳೆ ಮಧ್ಯಾಹ್ನ 2 ಕ್ಕೆನಗರದ ಹೊರವಲಯದ ಕೆ.ಎಸ್.ಆರ್.ಪಿ ಸುಲ್ತಾನಪೂರ ಸರಕಾರಿ ಪ್ರೌಢ ಶಾಲೆಯಲ್ಲಿ ಅಖಿಲ ಭಾರತ ಶರಣ ಸಾಹತ್ಯ ಪರಿಷತ್ತ ಜಿಲ್ಲಾ ಘಟಕದ ವತಿಯಿಂದ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದ ಧಾರ್ಮಿಕ ಪ್ರೇಮಿ ಲಿಂಗೈಕ್ಯ ಶಿವಪ್ಪ ವಿರೂಪಾಕ್ಷಪ್ಪ ಅಂಡಗಿ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನ್ಯಾಯವಾದಿ ಶಿವರಾಜ್ ಅಂಡಗಿ ತಿಳಿಸಿದ್ದಾರೆ.
ಈ-ಮೀಡಿಯಾ ಆನ್-ಲೈನ್ ನ್ಯೂಸ್ ನಿರ್ದೇಶಕರು ಹಾಗು ಪತ್ರಕರ್ತರಾದ ಡಾ. ಶಿವರಂಜನ ಸತ್ಯಂಪೇಟೆ ಅವರು ಕಾಯಕ ಮತ್ತು ದಾಸೊಹ ಕುರಿತು ಉಪನ್ಯಾಸ ನೀಡಲಿದ್ದು, ಕೆ.ಎಸ್.ಆರ್.ಪಿ ಕಮಾಂಡೆಂಟ್ ಬಸವರಾಜ ಜೆಳ್ಳೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕೆ.ಎಸ್.ಆರ್.ಪಿ ಶಾಲೆಯ ಮುಖ್ಯ ಗುರುಗಳಾದ ಡಾ. ರಾಜಕುಮಾರ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಪೇಂದ್ರ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ಡಾ. ಶರಣಬಸಪ್ಪ ವಡ್ಡನಕೇರಿ ಹಾಗೂ ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ಯುವಘಟಕದ ಅಧ್ಯಕ್ಷ ಮತ್ತು ದತ್ತಿ ದಾಸೋಹಿಗಳಾದ ಶಿವರಾಜ ಅಂಡಗಿ ಉಪಸ್ಥಿತರಿಲಿದ್ದಾರೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…