ಬಿಸಿ ಬಿಸಿ ಸುದ್ದಿ

‘ಕಾಯಕ-ದಾಸೋಹ ಶರಣರ ಪರಿಕಲ್ಪನೆಯ ಶ್ರೇಷ್ಠ ತತ್ವಗಳು’

ಕಲಬುರಗಿ: ಬಸವಣ್ಣನವರ ನೇತೃತ್ವದಲ್ಲಿ ನಡೆದ ವಚನ ಚಳವಳಿ ಐತಿಹಾಸಿಕ ಮಹತ್ವವು ಳ್ಳ ಅಪರೂಪದ ಚಳವಳಿ ಎಂದು ಪತ್ರಕರ್ತ- ಲೇಖಕ ಡಾ. ಶಿವರಂಜನ್ ಸತ್ಯಂಪೇಟೆ ಅಭಿಪ್ರಾಯಪಟ್ಟರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ತಾಜಸುಲ್ತಾನಪುರದ ಕೆ.ಎಸ್.ಆರ್.ಪಿ. ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಲಿಂ. ಶಿವಪ್ಪ ವಿರುಪಾಕ್ಷಪ್ಪ ಅಂಡಗಿ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕಾಯಕ ಮತ್ರು ದಾಸೋಹ ಕುರಿತು ಮಾತನಾಡಿದರು.

ಶರಣರ ಮಹತ್ವದ ಅನೇಕ ಪರಿಕಲ್ಪನೆಗಳಲ್ಲಿ ಕಾಯಕ-ದಾಸೋಹ ಸಿದ್ಧಾಂತವು ಸಾಮಾಜಿಕ, ಧಾರ್ಮಿಕ ಹಾಗೂ ಆರ್ಥಿಕ ವಕಯಗಳನ್ನು ಒಂದು ಕಟ್ಟಿನಲ್ಲಿ ಸುಭದ್ರವಾಗಿ ಕಟ್ಟಬಲ್ಲ ತತ್ವ ಇದೆ ಎಂದು ತಿಳಿಸಿದರು.

ಕೆಲಸಕ್ಕೆ ಕಾಯಕ, ದಾನಕ್ಕೆ ದಾಸೋಹದ ಸ್ಪರ್ಶ ನೀಡಿದ ಶರಣರು, ಸದೃಢ- ಸ್ವಾವಲಂಬಿ ಸಮಾಜದ ನಿರ್ಮಾತೃಗಳಾಗಿದ್ದಾರೆ. ‘ಕಲ್ಯಾಣ’ ನಾಡಿನ ಕನಸು ಕಂಡಿದ್ದ ಶರಣರು ಸಮಾಜದ ಏಳ್ಗೆಗೆ ಶ್ರಮಿಸಿದವರು ಎಂದು ವಿವರಿಸಿದರು.

ಮುಖ್ಯ ಅತಿಥಿಯಾಗಿದ್ದ ಕೆ.ಎಸ್. ಆರ್.ಪಿ. 6ನೇ ಬಟಾಲಿಯನ್ ಕಮಾಡೆಂಟ್ ಬಸವರಾಜ ಜಿಳ್ಳೆ ಮಾತನಾಡಿ, ಮನದ ಮಲಿನತೆಯನ್ನು ತೊಳೆದ ಶರಣರ ವಚನಗಳಲ್ಲಿ ಸನ್ನಡತೆ, ಸದಾಚಾರ ಮುಂತಾದ ವ್ಯಕ್ತಿತ್ವ ವಿಕಸನದ ಅಂಶಗಳಿವೆ. ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಓದು, ಬರಹದಲ್ಲಿ ತೊಡಗಬೇಕು ಎಂದು ಕರೆ ನೀಡಿದರು.

ಅಧ್ತಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರು ಡಾ. ರಾಜಕುಮಾರ ಪಾಟೀಲ ಮಾತನಾಡಿ, ಮನುಷ್ಯ ತನ್ನ ಬದುಕಿನಲ್ಲಿ ಏನಾದರೊಂದು ಮಹತ್ವದ್ದನ್ನು ಸಾಧಿಸಬೇಕಾದರೆ, ವಚನ ಸಾಹಿತ್ಯ ತುಂಬ ಸಹಕಾರಿಯಾಗಿದೆ. ಯುವಜನರ ಮನಸ್ಸು ಪರಿವರ್ತನೆಗೆ ತೆರೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ‌ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ. ಕುಪೇಂದ್ರ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಡಾ. ಶರಣಬಸಪ್ಪ ವಡ್ಡನಕೇರಿ ನಿರೂಪಿಸಿದರು. ದತ್ತಿ ದಾಸೋಹಿ ಹಾಗೂ ಶರಣ ಸಾಹಿತ್ಯ ಪರಿಷತ್ ಯುವ ಘಟಕದ ಅಧ್ಯಕ್ಷ ಶಿವರಾಜ ಅಂಡಗಿ ಸ್ವಾಗತಿಸಿದರು. ನ್ಯಾಯವಾದಿ ವಿನೋದ ಜೇನವೆರಿ ವಂದಿಸಿದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

3 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

3 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

3 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

3 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

3 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

3 hours ago