ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕ ನೀಡುವಲ್ಲಿ ಹಿಂದೇಟು ಹಾಕುತ್ತಿರುವ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರು ಮತ್ತು ಸಮಿತಿಯ ಪದಾಧಿಕಾರಿಗಳು ಲೆಕ್ಕದಲ್ಲಿ “ಗೋಲ್ ಮಾಲ್” ಮಾಡಿರುವ ಅನುಮಾನ ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದಾರೆ.ಅಲ್ಲದೇ, ಈ ಸಮ್ಮೇಳನದಲ್ಲಿ ಊಟದ ಟೆಂಡರ್ ಸೇರಿದಂತೆ ಎಲ್ಲವೂ ಹೊರಗಿನವರಿಗೆ ನೀಡುವ ಮೂಲಕ ಕಮೀಷನ್ ಧಂದೆ ನಡೆದಿದೆ ಎಂದು ಆರೋಪಿಸಿ, ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಒಕ್ಕೂಟ ಆಗ್ರಹಿಸಿದೆ.
ಇಂದು ನಗರದ ಪತ್ರಿಕಾ ಭವನದಲ್ಲಿ ಕಲ್ಯಾಣ ಕರ್ನಾಟಕ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಮಂಜುನಾಥ ನಾಲವಾರಕರ್ ಮತ್ತು ಜಿಲ್ಲಾಧ್ಯಕ್ಷರಾದ ಸಚೀನ ಫರಹತಾಬಾದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯದರ್ಶಿಗಳಾದ ವೀರಭದ್ರಪ್ಪ ಸಿಂಪಿ ರವರು ಲೆಕ್ಕ ನೀಡಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಕಲಬುರಗಿಯಲ್ಲಿ 2020ರ ಫೆಬ್ರವರಿ 5,6, ಮತ್ತು 7 ರಂದು ನಡೆದ ಸಮ್ಮೇಳನಕ್ಕೆ ನಾಡಿನ ಸಾಹಿತಿಗಳು, ಸರಕಾರಿ ನೌಕರರು, ಕ್ಕೆಗಾರಿಕೋದ್ಯಮಿಗಳು ಸೇರಿದಂತೆ ವಿವಿಧ ದಾನಿಗಳು ನೀಡಿದ ದೇಣಿಗೆ ಮತ್ತು ರಾಜ್ಯ ಸರ್ಕಾರ ನೀಡಿದ ಅನುದಾನದ ಲೆಕ್ಕ ಮತ್ತು ಖರ್ಚಿನ ವಿವರವನ್ನು ಸಮ್ಮೇಳನದ ಪ್ರಧಾನ ಕಾರ್ಯದರ್ಶಿಗಳಾದ ಕಸಾಪ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಅವರೇ ನಿಯಮಾವಳಿ ಪ್ರಕಾರ ನೀಡಬೇಕು ಎಂದು ಒತ್ತಾಯಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಕಲೆ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡದೇ ವ್ಯಾಪಾರಿಕರಣ ಮಾಡುತ್ತಿರುವದನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.ಏಕೆಂದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಕನ್ನಡವೇ ಮಾಯವಾಗುತ್ತಿದೆ.ಅನೇಕ ವ್ಯಾಪಾರಿ ಮಳಿಗೆಗಳಿಗೆ ಬಾಡಿಗೆ ಪಡೆದು ಅನ್ಯಭಾಷಾ ನಾಮಫಲಕಗಳಿಗೆ ಬತ್ತು ನೀಡುತ್ತಿರುವುದು ತೀರ ವಿಷಾದನೀಯ ಎಂದರು.
85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸರಕಾರಿ ನೌಕರರು ಮತ್ತು ಸರ್ಕಾರೇತರ ನೌಕರರು ಶ್ರಮಿಸಿದ್ದಾರೆ. ಅಲ್ಲದೇ ಮಾಧ್ಯಮಗಳು ಕೂಡ ಹೆಚ್ಚಿನ ಸಹಕಾರ ನೀಡಿದ್ದು,ಜಿಲ್ಲಾ ಕಸಾಪ ಅಧ್ಯಕ್ಷರು ತಮಗೇ ಬೇಕಾದವರನ್ನು ಮತ್ತು ಕಸಾಪ ಚುನಾವಣೆಯಲ್ಲಿ ಶ್ರಮಿಸುವವರನ್ನು ಅಭಿನಂದನಾ ಪತ್ರ ನೀಡಿರುವುದು ಒಕ್ಕೂಟ ಖಂಡಿಸುತ್ತದೆ ಎಂದು ತಿಳಿಸಿದರು.
ಈ ಬಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಕಲೆ.ಸಾಹಿತ್ಯ .ನಾಡು .ನುಡಿಗಾಗಿ ಶ್ರಮಿಸುವ ಆಕಾಂಕ್ಷಿಗೆ ಸಾಹಿತ್ಯ ಪರಿಷತ್ತಿಗೆ ಆಯ್ಕೆ ಮಾಡಬೇಕೇಂದು ಕನ್ನಡ ಸಾಹಿತ್ಯ ಪರಿಷತ್ತಿನ ಮತದಾರರಾಗಿ ಹಿರಿಯ ಸಾಹಿತಿಗಳಲ್ಲಿ ಮತ್ತು ಎಲ್ಲಾ ಸದಸ್ಯರಲ್ಲಿ, ಮತದಾರರಲ್ಲಿ ಒಕ್ಕೂಟ ಮನವಿ ಮಾಡುತ್ತಿದೆ. ಅಲ್ಲದೇ ಲೆಕ್ಕ ಪತ್ರ ನೀಡುವಂತೆ ಆಗ್ರಹಿಗೆ,ಒಕ್ಕೂಟದ ನಿಯೋಗವು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಬತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಗೋಷ್ಠಿಯಲ್ಲಿ ಸಂದೀಪ ಭರಣೆ, ಗೋಪಾಲ ನಾಟೀಕಾರ, ಶರಣು ಹೋಸಮನಿ, ಮಲ್ಲಿಕಾರ್ಜುನ ಸರಡಗಿ, ಕವಿನ ನಾಟೀಕಾರ, ದತ್ತು ಭಾಸಗಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…