ಆಳಂದ: ನಿಯಮಾನುಸಾರ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮುಂಬಡ್ತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಿಎಸ್ವೈ ತಿಳಿಸಿದ್ದು, ಇತ್ತೀಚಿಗೆ ಜರುಗಿದ ಚಳಿಗಾಲದ ಅಧಿವೇಶನದ ವಿಶಧಾನಸಭೆಯಲ್ಲಿ ಆಳಂದ ವಿಧಾನಸಭೆ ಸದಸ್ಯ ಸುಭಾಷ್ ಆರ್ ಗುತ್ತೇದಾರ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ ೨೦೧೩ ರನ್ವಯ ಕಲ್ಯಾಣ ಕರ್ನಾಟಕ ವೃಂದಗಳಲ್ಲಿ ಪರಿಗಣಿಸಲು ಇಚ್ಚಿಸಿದ ಅಧಿಕಾರಿ/ ನೌಕರರುಗಳಿಗೆ ಕಡ್ಡಾಯವಾಗಿ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದವರಿಗಾಗಿ ಮೀಸಲಿರಿಸುವ ಹುದ್ದೆಗಳಿಗಾಗಿ ಪರಿಗಣಿಸಬೇಕಾಗುತ್ತದೆ. ಈ ಕುರಿತಂತೆ ಎಲ್ಲಾ ಇಲಾಖೆಗಳಿಗೆ ಸುತ್ತೋಲೆ ಮೂಲಕ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದಲ್ಲಿ ಗುರುತಿಸಿಕೊಂಡಿರುವ ಅಧಿಕಾರಿ, ನೌಕರರಿಗೆ ಇಲಾಖೆಗಳಲ್ಲಿ ಮುಂಬಡ್ತಿ ನೀಡಲಾಗುತ್ತಿದೆ ಅದಾಗಿಯೂ ಕೆಲವು ಇಲಾಖೆಗಳಲ್ಲಿ ಬಡ್ತಿ ನೀಡುವ ಸಮಯದಲ್ಲಿ ಅನುಚ್ಛೇದ ೩೭೧(ಜೆ) ಪರಿಗಣಿಸದೇ ಇರುವ ಬಗ್ಗೆ ಕೆಲವು ವೈಯಕ್ತಿಕ ಮನವಿಗಳು ಸ್ವೀಕೃತವಾಗಿದ್ದು ಈ ರೀತಿ ಸ್ವೀಕೃತವಾದ ಮನವಿಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿ ಅರ್ಹತೆಯನುಸಾರ ಮುಂಬಡ್ತಿಗೆ ಪರಿಗಣಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಉತ್ತರಿಸಿದ್ದಾರೆ.
ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯ ನೌಕರರಿಗೆ ಬಡ್ತಿ ನೀಡುವ ನೀಡುವ ಸಮಯದಲ್ಲಿ ಕಲಂ ೩೭೧ಜೆ ಪರಿಗಣಿಸದೆ ಇರುವ ಕುರಿತು ಗಮನ ಸೆಳೆಯುವ ಪ್ರಶ್ನೆ ಕೇಳಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…