ದಾವಣಗೆರೆ: ವಾಲ್ಮೀಕಿ ಸಮುದಾಯದ ಆರ್ಥಿಕ ಸ್ವಾವಲಂಬನೆಗೆ ಬದ್ಧವಾಗಿರುವ ರಾಜ್ಯ ಸರ್ಕಾರ ವಾಲ್ಮೀಕಿ ಗುರುಪೀಠದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ. 10.8 ಕೋಟಿ ಅನುದಾನ ಮಂಜೂರು ಮಾಡಿದ್ದು, ಜಿಲ್ಲಾಧಿಕಾರಿ ಖಾತೆಗೆ ಈಗಾಗಲೇ ರೂ. 5.4 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಹರಿಹರ ತಾಲ್ಲೂಕಿನ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಬೃಹತ್ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದವರು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದುವರೆಯಲು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ ಎಂದರು.
ಮಹರ್ಷಿ ವಾಲ್ಮೀಕಿ ಅವರು ಪ್ರಪಂಚದ ಚರಿತ್ರೆಯ ಧೃವತಾರೆ. ಭಾರತೀಯ ಸಂಸ್ಕøತಿಯಲ್ಲಿ ಅವರ ಕೊಡುಗೆ ಅಪಾರವಾದದ್ದು. ವಾಲ್ಮೀಕಿ ಗುರುಪೀಠ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯುವಜನರ ಅಭಿವೃದ್ಧಿಗಾಗಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.
ಆಧ್ಯಾತ್ಮಿಕ ಚಿಂತಕ, ಶಿಕ್ಷಣ ತಜ್ಞ, ರಾಜನೀತಿ ತಜ್ಞ, ತತ್ವಜ್ಞಾನಿಯಾದ ವಾಲ್ಮೀಕಿ ಜನಮಾನಸದಲ್ಲಿ ಇಂದಿಗೂ ಇದ್ದಾರೆ. ಜಗತ್ತಿಗೆ ರಾಮಾಯಣ ಕೊಟ್ಟ ಶ್ರೇಷ್ಠ ದಾರ್ಶನಿಕ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಸಾಮಾಜಿಕ ಮೌಲ್ಯಗಳನ್ನು ರಾಮಾಯಣದಲ್ಲಿ ಪ್ರತಿಪಾದಿಸುವ ಮೂಲಕ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುತ್ತಾ ಸಮಾನ ಅವಕಾಶಗಳನ್ನು ಸಮಾಜಕ್ಕೆ ತಿಳಿಸಿಕೊಟ್ಟಿದ್ದಾರೆ.
ವಾಲ್ಮೀಕಿ ಸಮುದಾಯದವರ ಬಹುದಿನದ ಬೇಡಿಕೆಯಾದ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ನಾಗಮೋಹನ್‍ದಾಸ್ ಸಮಿತಿ ರಚಿಸಿದ್ದು, ಸಮಿತಿಯ ವರದಿಯನ್ನು ಈಗಾಗಲೇ ಪರಿಶೀಲನೆ ನಡೆಸಲಾಗುತ್ತಿದೆ. ಮೀಸಲಾತಿ ಬೇಡಿಕೆಯನ್ನು ಅತೀ ಶೀಘ್ರವಾಗಿ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಕೊರೋನದಿಂದ ರಾಜ್ಯದ ಆರ್ಥಿಕ ಮಟ್ಟ ಕುಸಿದಿದ್ದು ಹಣಕಾಸಿನ ಇತಿಮಿತಿಯಲ್ಲಿಯೇ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲಿದ್ದೇವೆ. ಕಳೆದ ಮೂರು ದಿನದಿಂದ ಬಜೆಟ್ ತಯಾರಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಪೂರ್ವಭಾವಿಯಾಗಿ ತೆರಿಗೆ ಸಂಗ್ರಹಣೆಯಾಗುತ್ತಿದೆ ಎಂದು ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಜಲಸಂಪನ್ಮೂಲ ಸಚಿವ ಮತ್ತು ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರಾದ ರಮೇಶ್ ಲ.ಜಾರಕಿಹೊಳಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಪ್ರವಾಸೋದ್ಯಮ ಸಚಿವ ಆನಂದಸಿಂಗ್, ಸಂಸದರಾದ ಜಿ.ಎಂ.ಸಿದ್ದೇಶ್ವರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಶಾಸಕರಾದ ಎಸ್.ವಿ.ರಾಮಚಂದ್ರ, ಶಾಸಕರಾದ ಸತೀಶ ಲ.ಜಾರಕಿಹೊಳಿ, ಶಾಮನೂರು ಶಿವಶಂಕರಪ್ಪ, ಡಾ.ಯತೀಂದ್ರ, ಚಿಕ್ಕಮಾದು, ರಾಜವೆಂಕಟಪ್ಪ ನಾಯಕ, ಡಿ.ಕೆ.ಶಿವಕುಮಾರ್, ನರಸಿಂಹನಾಯಕ ಉಪಸ್ಥಿತರಿದ್ದರು. ವಾಲ್ಮೀಕಿ ವಿಜಯ ಸ್ಮರಣ ಸಂಪುಟ ಸಂಪಾದಕ ಡಾ.ಎ.ಬಿ.ರಾಮಚಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…