ಕಲಬುರಗಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ, ಕಾನೂನು ಸೇವಾ ಪ್ರಾಧಿಕಾರದ ಸಭಾಭವನದಲ್ಲಿ 5 ದಿನಗಳ ಕಾರ್ಯಾಗಾರ ತರಬೇತಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ನ್ಯಾಯವಾದಿ ಜೇನವೆರಿ ವಿನೋದಕುಮಾರ ರವರು 3 ನೇ ದಿನದ ಕಾರ್ಯಾಗಾರದಲ್ಲಿ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿ, ಸರಕಾರಿ ಅದೇಶಗಳು ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳು ಹಾಗೂ MNREGA ಕಾಯ್ದೆ ಕುರಿತು ಮಾತನಾಡಿದರು.
ಮೊದಲಿಗೆ, ಕಾರ್ಯಗಾರದ ಸಂಯೋಜಕರಲ್ಲಿ ಒಬ್ಬರಾದ ನ್ಯಾಯವಾದಿ ಪ್ರೇಮ ಮೋದಿ ಯವರು ಬರಮಾಡಿಕೊಂಡರು, ನ್ಯಾಯವಾದಿಗಳ ಸಂಘದ ಮಾಜಿ ಕಾರ್ಯದರ್ಶಿ. ಬಿಎನ್ ಪಾಟೀಲ ಹೂಗುಚ್ಛ ನೀಡಿ ಸ್ವಾಗತಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಆಯ್ದ ಸ್ವಯಂ ಸೇವಕರು ಅಸಕ್ತಿ ವಹಿಸಿ ಸರಕಾರಿ ಆದೇಶ ಗಳು ಹೇಗೆ ಪ್ರಶ್ನಿಶಬೇಕು ಎನ್ನುವ ಬಗ್ಗೆ ಅಲ್ಲದೆ ಸಾಮಾಜಿಕ ಕಲ್ಯಾಣ ಯೋಜನೆಗಳ ಕುರಿತು ತಿಳಿದುಕೊಂಡರು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಶೆಟ್ಟರ ವಹಿಸಿದ್ದರು. ಇನ್ನೋರ್ವ ನ್ಯಾಯವಾದಿ ಕಾರ್ಯಾಗಾರದ ಸಹಾಯಕ ಸoಯೋಜಕ ಗಣೇಶ ಅಂಕಲಗಿ ನಿರೂಪಣೆ ಗೈದು, ವಂದಿಸಿದರು. ಕಾರ್ಯಕ್ರಮ ದಲ್ಲಿ ಹಿರಿಯ ಹಾಗೂ ಕಿರಿಯ ನ್ಯಾಯವಾದಿಗಳು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…