ರಾಷ್ಟ್ರೀಯ ಗುಣಮಟ್ಟ ಮೌಲ್ಯಾಂಕನ ಪರಿಷತ್ ಸದಸ್ಯರಾಗಿ ಡಾ:ಎಸ್.ಹೆಚ್ ಹೊಸಮನಿ ನೇಮಕ

0
17

ಸುರಪುರ: ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಸುರಪುರದಲ್ಲಿರುವ ಶ್ರೀ ಪ್ರಭು ಕಲಾ, ವಿಜ್ಞಾನ & ಜೆ.ಎಮ್. ಬೊಹ್ರಾ ವಾಣಿಜ್ಯ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಎಸ್.ಎಚ್. ಹೊಸಮನಿ ಅವರನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ ದ ರಾಷ್ಟ್ರೀಯ ಗುಣಮಟ್ಟ ಮೌಲ್ಯಾಂಕನ ಪರಿಷತ್ತು (ನ್ಯಾಕ್) ಗೆ ಸದಸ್ಯರನ್ನಾಗಿ ಆಯ್ಕೆ ಮಾಡಿದೆ.

ಬೆಂಗಳೂರಿನಲ್ಲಿ ಕಛೇರಿಯನ್ನು ಹೊಂದಿರುವ ಸಂಸ್ಥೆಯು ಸಮಿತಿ ರಚಿಸಿ ಅದರ ಸದಸ್ಯರುಗಳ (ನ್ಯಾಕ್ ಪೀರ ಟೀಮ್) ಮೂಲಕ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ ಅದರ ಗುಣಮಟ್ಟವನ್ನು ಮೌಲ್ಯಮಾಪನ ಮಾಡಿ ವರದಿ ನೀಡುತ್ತದೆ.

Contact Your\'s Advertisement; 9902492681

ಶೈಕ್ಷಣಿಕ ಅಂತಸ್ತು, ಬೋಧನಾನುಭವ, ಸಂಶೋಧನೆ ಮುಂತಾದ ಅಂಶಗಳನ್ನು ಪರಿಗಣಿಸಿ ಈ ಸಂಸ್ಥೆಗೆ ಆಯ್ಕೆ ಮಾಡಲಾಗುತ್ತದೆ.ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶೈಕ್ಷಣಿಕವಾಗಿ ಹಿಂದುಳಿದ ಭಾಗದವರಾದ ಡಾ. ಎಸ್.ಎಚ್. ಹೊಸಮನಿ ಅವರ ಆಯ್ಕೆ ಈ ಭಾಗದ ಶಿಕ್ಷಣ ಪ್ರೇಮಿಗಳಲ್ಲಿ ಸಂತಸ ಮೂಡಿಸಿದೆ.

ನ್ಯಾಕ್ ಪೀರ ಟೀಮ್ ಸಂಸ್ಥೆಗೆ ಆಯ್ಕೆಯಾಗಿದ್ದಕ್ಕೆ ಹೈ.ಕ.ಶಿ. ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರು ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯರು ಬೋಧಕ & ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here