ಫೆಬ್ರವರಿ 15ರವರೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

0
101

ಕಲಬುರಗಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ದಿನಾಂಕವನ್ನು 2021ರ ಫೆಬ್ರವರಿ 15 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮಹಿಮೂದ್ ಅವರು ತಿಳಿಸಿದ್ದಾರೆ.

ಅರ್ಹ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಪಿ.ಯು.ಸಿ. ಮತ್ತು ತತ್ಸಮಾನ ಹಾಗೂ ಎಲ್ಲಾ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Contact Your\'s Advertisement; 9902492681

ಅರ್ಹ ವಿದ್ಯಾರ್ಥಿಗಳು ಸಂಬಂಧಪಟ್ಟ ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಸದರಿ ಮಾಹಿತಿ ಕೇಂದ್ರದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು 2021ರ ಫೆಬ್ರವರಿ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನಲ್ಲಿರುವ ತಾಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here