ಕಲಬುರಗಿ: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್.ಪಿ.ಪಿ.ಸಿ.ಡಿ. ಮತ್ತು ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿನ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೆರಿಟ್-ಕಂ-ರೋಸ್ಟರ್ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಆಸ್ಪತ್ರೆಯಲ್ಲಿನ ಆಡಿಯೋಮೆಟ್ರಿಕ್ ಅಸಿಸ್ಟಂಟ್-01 ಹುದ್ದೆ ಹಾಗೂ ಆಳಂದ ತಾಲೂಕು ಆಸ್ಪತ್ರೆ ಮತ್ತು ಕಲಬುರಗಿ ಜಿಲ್ಲಾ ಆಸ್ಪತ್ರೆಯಗಳಲ್ಲಿನ ಆರ್.ಎಂ.ಎನ್.ಸಿ.ಹೆಚ್.+ಏ ಮಹಿಳಾ ಕೌನ್ಸಲರ್ ತಲಾ ಒಂದು (ಒಟ್ಟು 02 ಹುದ್ದೆಗಳಿಗೆ) ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಕುಟುಂಬ ಕಲ್ಯಾಣ ವಿಭಾಗದಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ ಸದರಿ ಕಚೇರಿಯಲ್ಲಿ 2019ರ ಜೂನ್ 24 ರೊಳಗಾಗಿ ಸಲ್ಲಿಸಬೇಕು.
ವಿದ್ಯಾರ್ಹತೆ, ಮಾಸಿಕ ಸಂಭಾವನೆ ಹಾಗೂ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆ, ಷರತ್ತು ಮತ್ತು ನಿರ್ಬಂಧನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-278619 ಗೆ ಸಂಪರ್ಕಿಸಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಸಂಘದ ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
View Comments
Iam diploma automobile
I don't have job