ಕಲಬುರಗಿ: ಕನ್ನಡ ಪುಸ್ತಕ ಪ್ರಾಧಿಕಾರದಿಂದ 2018 ನೇ ಸಾಲಿಗೆ 18 ರಿಂದ 35 ವರ್ಷದೊಳಗಿನ ಯುವ ಬರಹಗಾರರಿಂದ ಕನ್ನಡ ಸಾಹಿತ್ಯದಲ್ಲಿ ರಚಿಸಿರುವ ಚೊಕ್ಕಲ ಕೃತಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಠ ೬೦ ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.
ಅರ್ಜಿಯೊಂದಿಗೆ ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರ ಅಥವಾ ಅಧಿಕೃತವಾದ ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರಗಳ ಪ್ರತಿ ಹಾಗೂ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರವನ್ನು ಲಗತ್ತಿಸಿ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ ಜೆ.ಸಿ ರಸ್ತೆ ಬೆಂಗಳೂರು- 560002 ಇವರಿಗೆ 2019ರ ಜುಲೈ ೬ರೊಳಗಾಗಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರ ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ080-22484516, 22017704 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.