ಕಲಬುರಗಿ: ಯುವ ಮುನ್ನಡೆ, ಸಂವಾದ ಯುವ ಸಂಪನ್ಮೂಲ ಕೇಂದ್ರವು ಫೆಬ್ರವರಿ 13 ರಂದು ಬೆಳಿಗ್ಗೆ 10.30ಕ್ಕೆ ನಗರದ ರಾಮ ಮಂದಿರ ವೃತ್ತದ ಬಳಿ ಶ್ರೀ ಶಿವಶರಣ ಹರಳಯ್ಯ ಸಾಂಸ್ಕೃತಿಕ ಭವನದಲ್ಲಿ “ಯುವಜನ ಹಕ್ಕಿನ ಮೇಳ” ನಡೆಯಲಿದೆ ಎಂದು ಕಲಬುರಗಿ ಸಂವಾದ ಯುವ ಸಂಪನ್ಮೂಲ ಕೇಂದ್ರ ಸಂಯೋಜಕಿ ರುಕ್ಮಿಣಿ ನಾಗಣ್ಣವರ ತಿಳಿಸಿದ್ದಾರೆ.
ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ದಯಾನಂದ ಅಗಸರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಭಾಸ್ಕರ್ ನಾಯಕ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ವಿಷಯ ತಜ್ಞರು ಮತ್ತು ಯುವ ಚಿಂತಕರು ತಮ್ಮ ವಿಚಾರವನ್ನು ಮಂಡಿಸುವರು. ನಂತರ ಸಂವಾದ ಯುವ ಒಡನಾಡಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಇದಕ್ಕೂ ಮುನ್ನ ರಾಮ ಮಂದಿರ ವೃತ್ತದಲ್ಲಿ ಬೆಳಿಗ್ಗೆ 9 ಗಂಟೆಗೆ ಯುವಜನರು ಯುವ ಸರಪಳಿ ನಿರ್ಮಿಸಿ, ಘೋಷಣೆಗಳನ್ನು ಕೂಗುವ ಮೂಲಕ ಯುವಜನ ಸಬಲೀಕರಣ ನಿಗಮ ಸ್ಥಾಪನೆಗೆ ಒತ್ತಾಯಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…