ಶಹಾಬಾದ: ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಮಾತ್ರ ಅವರಲ್ಲಿ ಹೆಚ್ಚಿನ ಚೈತನ್ಯ ಹಾಗೂ ಪ್ರಗತಿ ಕಾಣಲು ಸಾಧ್ಯ ಎಂದು ಕೃಷ್ಣ ಗ್ರಾಮೀಣ ಬ್ಯಾಂಕಿನ ವಿಭಾಗೀಯ ವ್ಯವಸ್ಥಾಪಕ ಅಶೋಕ ರಾಮನಾಳ ಹೇಳಿದರು.
ಅವರು ನಗರದ ಕೋಲ್ಹಾಪೂರ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಸಭಾಂಗಣದಲ್ಲಿ ಕೃಷ್ಣ ಗ್ರಾಮೀಣ ಬ್ಯಾಂಕಿನಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಆಯೋಜಿಸಲಾದ ಹಣಕಾಸು ಸಾಕ್ಷರತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ತ್ರೀ ಶಕ್ತಿ ಸ್ವಹಾಯ ಸಂಘಗಳ ಅಸ್ತಿತ್ವಕ್ಕೆ ಬಂದ ಮೇಲೆ ಮಹಿಳಾ ಶಕ್ತಿ ಏನೆಂಬುದು ಇಡೀ ಸಮಾಜಕ್ಕೆ ಗೊತ್ತಾ ಗಿದೆ. ಮಹಿಳೆಯರಿಗೆ ಸಾಲ ನೀಡಿದರೆ ಅದು ಶೇ.೧೦೦ರಷ್ಟು ವಾಪಸ್ ಬರುತ್ತೆ ಎಂಬ ವಿಶ್ವಾಸ ಎಲ್ಲ ಬ್ಯಾಂಕ್‌ಗಳಲ್ಲಿ ಮೂಡಿದೆ. ಬ್ಯಾಂಕ್‌ಗಳು ಮಹಿಳೆಯರಿಗೆ ಹೆಚ್ಚು ಆರ್ಥಿಕ ನೆರವು ಒದಗಿಸಲು ಮುಂದೆ ಬಂದಿವೆ. ಸ್ತ್ರೀಯರು ಸ್ವ-ಸಹಾಯ ಸಂಘಗಳ ಮೂಲಕ ಪಡೆದ ಹಣವನ್ನು ಇಮ್ಮಡಿಗೊಳಿಸುವ ಮೂಲಕ ಸ್ವಾವಲಂಬಿ ಬದುಕು ಸಾಗಿಸಲು ಮುಂದಾಗಬೇಕು. ತಮ್ಮ ಮಕ್ಕಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಮುಂದಾಗಬೇಕು. ಶಿಕ್ಷಣ ಕೊಡಿಸಲು ಸಾಧ್ಯವಿಲ್ಲವೆಂದು ಹೆಣ್ಣು ಮಕ್ಕಳನ್ನು ಬೇಗ ವಿವಾಹ ಬಂಧನಕ್ಕೆ ದೂಡುವುದು ಸರಿಯಲ್ಲ. ಆಕೆಗೆ ಉತ್ತಮ ಶಿಕ್ಷಣ ಕೊಡಿಸಿ ಸರಿಯಾದ ಸ್ಥಾನಮಾನಕ್ಕೇರಿಸಿದರೆ ಪುರುಷರಿಗಿಂತ ಮಿಗಿಲಾದ ಸಾಧನೆ ಮಾಡುತ್ತಾಳೆ.ಅಲ್ಲದೇ ಬ್ಯಾಂಕಿನಿಂದ ಪಡೆದ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿ ಮಾಡಬೇಕು.ಆದರೆ ಇತ್ತಿಚ್ಚಿನ ದಿನಗಳಲ್ಲಿ ಸಾಲ ಮರುಪಾವತಿಯಾಗುತ್ತಿಲ್ಲ.ಅಲ್ಲದೇ ಮಧ್ಯವರ್ತಿಗಳ ಮೊರೆ ಹೋಗಿ ಸಾಲ ದುರ್ಬಳಕೆಯಾಗುತ್ತಿದೆ ಎಂದು ಹೇಳಿದರು.
ನಗರದ ಕೃಷ್ಣ ಬ್ಯಾಂಕಿನ ವ್ಯವಸ್ಥಾಪಕರಾದ ಕುಮಾರಿ ರಾಜರಶ್ಮಿ ಮಾತನಾಡಿ, ಮಹಿಳಾ ಸ್ವಾವಲಂಬಿ ಬದುಕಿಗೆ ಸರಕಾರ ಅನೇಕ ಯೋಜನೆಗಳನ್ನು ತಂದಿದೆ. ಮುದ್ರಾ ಯೋಜನೆ, ಮಹಿಳಾ ಉದಯಂ ನಿಧಿ ಯೋಜನೆ, ಸ್ತ್ರೀ-ಶಕ್ತಿ ಪ್ಯಾಕೇಜ, ದೇನಾ ಶಕ್ತಿ ಯೋಜನೆ, ಅನ್ನಪೂರ್ಣ ಯೋಜನೆ,ಉದ್ಯೋಗಿನಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳಿದ್ದು ಮಹಿಳೆಯರು ಇದರ ಸದುಪಯೋಗ ಪಡಿಸಿಕೊಂಡು ಸ್ವಾವಲಂಬಿಯಾಗಿ ಪರುಷನ ಸರಿಸಮಾನವಾಗಿ ಬೆಳೆಯಬೇಕು.ಅದಕ್ಕಾಗಿ ಸ್ತ್ರೀ-ಶಕ್ತಿ ಸಂಘಗಳು ಕೈಗೊಳ್ಳುವ ಎಲ್ಲ ಅಭಿವೃದ್ಧಿ ಕೆಲಸಗಳಿಗೆ ತಾವೂ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹಾಜಪ್ಪ ಬಳಿಚಕ್ರ, ಅಲತಾಫ್ ಶಾ, ಎಸ್.ವಿ.ಕುಲಕರ್ಣಿ, ರವಿಕುಮಾರ ಅಲ್ಲಂಶೆಟ್ಟಿ, ಸವಿತಾ ಶರಣಪ್ಪ, ಸುನಂದಾ ನಾಗಣ್ಣಗೌಡ, ದಾಕ್ಷಾಯಿಣಿ ಶರಣಯ್ಯ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…