ಕಲಬುರಗಿ: ಬಡವರಿರಲಿ, ಮಕ್ಕಳಾಗಲಿ, ವೃದ್ಧರಾಗಲಿ ಪ್ರತಿಯೊಬ್ಬ ಮನುಷ್ಯನಿಗೆ ಗೌರವದಿಂದ ಬದುಕುವ ಹಕ್ಕಿದೆ. ಆ ಹಕ್ಕು ಒದಗಿಸುವ ಕಾರ್ಯ ಎಲ್ಲರಿಂದಾಗಬೇಕು ಎಂದು ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಜೆ. ಸತೀಶ್ ಸಿಂಗ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾವಾದಿಗಳ ಸಂಘ ಹಾಗೂ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ ಕಲಬುರಗಿ ಇವರ ಸಂಯುಕ್ತಾಶಯದಲ್ಲಿ ಗುರುವಾರ ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ಹಾಗೂ ತಿದ್ದುಪಡಿ-2016ರ ಕುರಿತು ಬೀದಿ ನಾಟಕ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲಕಾರ್ಮಿಕರ ನಿಷೇಧ ದಿನದಂದು ಮಾತ್ರ ಮಕ್ಕಳ ಬಗ್ಗೆ ಚಿಂತಿಸುವುದಲ್ಲ, ಪ್ರತಿ ದಿನ ನಾವು ನಮ್ಮ ಸುತ್ತಮುತ್ತಲಿನ ಪ್ರದೇಶ, ರಸ್ತೆ, ಬಡಾವಣೆ, ಹೋಟೆಲ್‍ಗಳಲ್ಲಿ, ಕಂಡುಬರುವ ಮಕ್ಕಳ ಬಗ್ಗೆ ವಿಶೇಷ ಗಮನಹರಿಸಬೇಕು. 14 ವರ್ಷದೊಳಗಿನ ಬಾಲಕಾರ್ಮಿಕರಾಗಿದ್ದಲ್ಲಿ ಕರೆದು ವಿಚಾರಿಸಬೇಕು ಮತ್ತು ಅಂತಹ ಮಕ್ಕಳನ್ನು ಬಾಲ ಮಂದಿರಕ್ಕೆ ಕಳುಹಿಸುವ ಕಾರ್ಯ ಮಾಡಬೇಕು. “14 ವರ್ಷದ ಮಕ್ಕಳ ನಡೆ ಶಾಲೆಯ ಕಡೆ” ಎಂಬ ಘೋಷ್ಯವಾಕ್ಯದಂತೆ ನಾವೆಲ್ಲರು ಕಾರ್ಯಪ್ರವೃತ್ತರಾಗಿ ಮಕ್ಕಳಿಗೆ ಶಾಲೆಗೆ ಸೇರಿಸುವ ಮತ್ತು ಕಲಬುರಗಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಆರ್.ಶೆಟ್ಟರ್ ಅವರು ಮಾತನಾಡಿ ಪ್ರತಿಯೊಬ್ಬರು ದೈನಂದಿನ ಬದುಕಿನಲ್ಲಿ ಒಂದು ದಿನವಾದರು ತಮ್ಮ ಹತ್ತಿರದ ಬಾಲ ಕಾರ್ಮಿಕರನ್ನು ಗುರುತಿಸಿ ಅವರನ್ನು ಬಾಲಮಂದಿರಕ್ಕೆ ತಲುಪಿಸುವ ಕಾರ್ಯ ಮಾಡಬೇಕು ಎಂದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅರುಣಕುಮಾರ ಕಿಣ್ಣಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಸಿಸ್ಟರ್ ರೀನಾ ಡಿಸೋಜಾ, ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆÉ ಆರತಿ ಪೂಜಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ಪ್ರೊಬೇಷನರ್ ಕಾರ್ಮಿಕ ಅಧಿಕಾರಿ ಡಾ. ದತ್ತಾತ್ರೇಯ ಗಾದಾ, ಹಿರಿಯ ಕಾರ್ಮಿಕ ನಿರೀಕ್ಷಕ ರವೀಂದ್ರ ಕುಮಾರ, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಹಾಗೂ ಮತ್ತಿತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಲಾವಿದರು ಸಾಂಕೇತಿಕವಾಗಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…