ಅಫಜಲಪುರ: ಹಾವನೂರ್ ಉಪಕೇಂದ್ರದ ಚಿಕ್ಕ ಗೊಬ್ಬೂರು ಗ್ರಾಮದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನೂತನ ಗ್ರಾಮ ಪಂಚಾಯತ್ ಸದಸ್ಯರಾದ ಮಹಾದೇವಿ ಗುರಣ್ಣ ಕೂಡಿ ಅವರು ದೀಪವನ್ನು ಬೆಳಗುವುದರ ಮೂಲಕ ಚಾಲನೆಯನ್ನು ನೀಡಿದರು.
ತದನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಬಳೆ ಮಾತನಾಡಿ ಸದೃಢವಾದಮಗು ದೇಶದ ಸಂಪತ್ತು ಎನ್ನುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು ತುಂಬಾ ಸಂತೋಷ, ಈ ಸಂದರ್ಭದಲ್ಲಿ ತಾಯಿ ಮರಣ ಶಿಶುಮರಣ ಗ್ರಾಮೀಣ ಪ್ರದೇಶದಲ್ಲಿ ಆಗದಂತೆ ತಡೆಯುವ ನಿಟ್ಟಿನಲ್ಲಿ ಸರಕಾರದ ಯೋಜನೆಗಳು, ಹಾಗೂ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ವಿವರವಾಗಿ ನೀಡಿದರು.
ನಂತರ ಸತ್ಯವತಿ ,MLHP ತಾಯಿಯ ಎದೆಹಾಲಿನ ಮಹತ್ವ ಕುರಿತು ತುಂಬಾ ಮಾರ್ಮಿಕವಾಗಿ ಮನಮುಟ್ಟುವಂತೆ ವಿವರಿಸಿದರು. ಆರೋಗ್ಯ ಸಹಾಯಕ ಲಸಿಕೆಗಳ ಮಹತ್ವ ಕುರಿತು ಮಾಹಿತಿ ನೀಡಿದರು, ತದನಂತರ ಗುಂಡಮ್ಮ ಕೆ ಆರೋಗ್ಯ ಸಹಾಯಕಿ ಮಹಿಳೆ ಕುಟುಂಬ ಕಲ್ಯಾಣ ಯೋಜನೆಗಳಲ್ಲಿ ತಾತ್ಕಾಲಿಕ ವಿಧಾನಗಳ ಕುರಿತು ಮಾಹಿತಿ ನೀಡಿದರು.
ಕೊನೆಯದಾಗಿ ಹರ್ಷ, ಶಿವಶಂಕರ್, ಶರತ್ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಗ್ರಾಮ ಪಂಚಾಯತ್ ಸದಸ್ಯರಿಂದ ವಿತರಿಸಲಾಯಿತು ಕಾರ್ಯಕ್ರಮದ ವಂದನಾರ್ಪಣೆಯನ್ನು ಆಶಾ ಕಾರ್ಯಕರ್ತೆ ಮಮತಾ ಅವರೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…