ರಾಜ್ಯಸಭೆಯ ವಿರೋಧ ಪಕ್ಷ ನಾಯಕರಾಗಿ ಡಾ. ಮಲ್ಲಿಕಾರ್ಜುನ್ ಖರ್ಗೆ ಆಯ್ಕೆ

0
80

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಮಾಡಲಾಗಿದೆ.

ಗುಲಾಂ ನಬಿ ಆಜಾದ್ ಸೇರಿದಂತೆ ನಾಲ್ವರು ರಾಜ್ಯಸಭಾ ಸದಸ್ಯರು ನಿವೃತ್ತರಾಗುತ್ತಿದ್ದು, ಖರ್ಗೆ ಅವರಿಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭೆ ಸಭಾಪತಿಗೆ ಪತ್ರ ಬರೆದಿತ್ತು.

Contact Your\'s Advertisement; 9902492681

ಕಳೆದ ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ ವಿರೋಧ ಪಕ್ಷದ ನಾಯಕರಾಗಿದ್ದರು, ಅವರು ನಂತರ ಚುನಾವಣೆಯಲ್ಲಿ ಪರಾಭವಗೊಂಡ ಹಿನ್ನೆಲೆಯಲ್ಲಿ ಪಕ್ಷ ಅವರನ್ನು ಮತ್ತೇ ರಾಜ್ಯಸಭೆಗೆ ನಾಮಕರಣ ಮಾಡಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here