ಬೆಂಗಳೂರು: ಅನಿಯಂತ್ರಿತವಾಗಿ ಏರಿಕೆಯಾಗುತ್ತಿರುವ ಸಿಮೆಂಟ್, ಸ್ಟೀಲ್ ಮತ್ತು ಕಟ್ಟಡ ನಿರ್ಮಾಣ ಸಾಮಗ್ರಿಗಳ ಬೆಲೆಗಳನ್ನು ನಿಯಂತ್ರಣಕ್ಕೆ ಸರಕಾರ ಮುಂದಾಗದೇ ಇದ್ದಲ್ಲಿ, ಕೃಷಿಯ ನಂತರ ಅತಿಹೆಚ್ಚು ಕೆಲಸಗಾರರನ್ನು (60ಮಿಲಿಯನ್) ಹೊಂದಿರುವ ಕಟ್ಟಡ ನಿರ್ಮಾಣ ಕ್ಷೇತ್ರ ಅನಿವಾರ್ಯವಾಗಿ ನೈಫಥ್ಯಕ್ಕೆ ಸರಿಯಲಿದೆ ಎಂದು ಬಿಲ್ಡರ್ಸ್ ಅಸೋಸಿಯೇಷನ್ ಬೆಂಗಳೂರು ಶಾಖೆಯ ಅಧ್ಯಕ್ಷ ಜಿ.ಎಂ ರವೀಂದ್ರ ವಿಷಾಧ ವ್ಯಕ್ತಪಡಿಸಿದರು.
ಬೆಂಗಳೂರಿನ ಮೌರ್ಯ ವೃತ್ತದ ಬಳಿ ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ರಸ್ತೆಗೆ ಸುರಿಯುವ ಮೂಲಕ ಪ್ರತಿಭಟಿಸಿದ ಬಿಲ್ಡರ್ಸ್ ಅಸೋಸಿಯೇಷನ್ ನ ನೂರಾರು ಸದಸ್ಯರು, ಸಿಮೆಂಟ್ ಮತ್ತು ಸ್ಟೀಲ್ ದರಗಳನ್ನು ನಿಯಂತ್ರಣಕ್ಕೆ ತನ್ನಿ ಎಂದು ಘೋಷಣೆಗಳನ್ನು ಕೂಗಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಬಿಲ್ಡರ್ಸ್ ಅಸೋಸಿಯೇಷನ್ ಬೆಂಗಳೂರು ಶಾಖೆಯ ಅಧ್ಯಕ್ಷ ಜಿ. ಎಂ ರವೀಂದ್ರ, ಕಟ್ಟಡ ನಿರ್ಮಾಣ ಕ್ಷೇತ್ರ ದೇಶದ ಜಿಡಿಪಿಗೆ ಪ್ರಮುಖ ಕೊಡುಗೆಯನ್ನು ನೀಡುತ್ತಿದೆ. 60 ಮಿಲಿಯನ್ ಕಾರ್ಮಿಕರನ್ನು ಹೊಂದಿರುವ ಈ ಕ್ಷೇತ್ರ ಕೃಷಿಯ ನಂತರ ಅತಿ ಹೆಚ್ಚು ಉದ್ಯೋಗಾವಕಾಶ ನೀಡಿರುವ ಕ್ಷೇತ್ರವಾಗಿದೆ. ಕಟ್ಟಡ ನಿರ್ಮಾಣಕ್ಕೆ ಪ್ರಮುಖ ಕಚ್ಚಾವಸ್ತುವಾಗಿ ಸಿಮೆಂಟನ್ನು ಬಳಸಲಾಗುತ್ತದೆ. ಸಿಮೇಂಟ್ ಹಾಗೂ ಸ್ಟೀಲ್ ಕಟ್ಟಡ ಕಾಮಗಾರಿಯ ಅತ್ಯಂತ ಅವಶ್ಯಕ ಕಚ್ಚಾ ವಸ್ತುಗಳು. ಈ ವಸ್ತುಗಳ ದರವನ್ನು ದಿನೇ ದಿನೇ ಹೆಚ್ಚಿಸಲಾಗುತ್ತಿದೆ. ಸಿಮೆಂಟ್ ಉತ್ಪಾದಕರು ತಮ್ಮಲ್ಲೇ ತಂಡವನ್ನು ರಚಿಸಿಕೊಂಡು ಬೆಲೆಯನ್ನು ಹೆಚ್ಚಿಸುತ್ತಿರುವ ಬಗ್ಗೆ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾಂಪಿಟೇಷನ್ ಕಮಿಷನ್ ಗೆ ದೂರು ನೀಡಿತ್ತು. ಇದರ ವಿಚಾರಣೆ ನಡೆಸಿದ ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ ಬಿಲ್ಡರ್ಸ್ ಅಸೋಸಿಯೇಷನ್ ಗೆ 6307 ಕೋಟಿ ರೂಪಾಯಿಗಳ ನಷ್ಟವನ್ನು ಭರಿಸಿಕೊಡುವಂತೆ ಆದೇಶ ನೀಡಿದೆ. ಈ ಪ್ರಕರಣದ ಮೇಲ್ಮನವಿಯ ತನಿಖೆ ಇನ್ನೂ ಕೂಡಾ ಸುಪ್ರೀಂ ಕೋರ್ಟಿನಲ್ಲಿದೆ ಎಂದು ತಿಳಿಸಿದ್ದಾರೆ.
ಇದನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರಕಾರ ನಿಯಂತ್ರಣ ಪ್ರಾಧಿಕಾರವನ್ನು ರಚಿಸುವ ಮೂಲಕ ಅನಿಯಂತ್ರಿತವಾಗಿ ಬೆಲೆ ಹೆಚ್ಚಿಸುವುದು, ಮಾರುಕಟ್ಟೆಯಲ್ಲಿ ಪ್ರಾಬಲ್ಯ ಪಡೆಯಲು ಯತ್ನಿಸುವುದು ಹಾಗೂ ಕೃತಕ ಅಭಾವ ಸೃಷ್ಟಿಸುವುದನ್ನ ತಪ್ಪಿಸಬೇಕಾಗಿದೆ. ಈ ರೀತಿಯ ಬೆಲೆ ಏರಿಕೆ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ದೂಡಲಿದ್ದು, ಸರಕಾರಿ ಯೋಜನೆಗಳ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ. ಕಳೆದ ಮೂರು ವರ್ಷಗಳ ಕಂಪನಿಗಳ ಉತ್ಪಾದನಾ ಸಾಮರ್ಥ್ಯ ಹಾಗೂ ಉತ್ಪಾದನೆಯಾದ ಪ್ರಮಾಣ ನೋಡಿದಲ್ಲಿ ಸಿಮೆಂಟ್ ಕಂಫನಿಗಳ ವ್ಯತಿರಿಕ್ತ ಹಿತಾಸಕ್ತಿಯನ್ನು ಕಾಣಬಹುದಾಗಿದೆ. ಬೇಕಂತಲೇ ತಮ್ಮ ಸಾಮರ್ಥ್ಯಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ಉತ್ಪಾದನೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಕೃತಕ ಅಭಾವನ್ನು ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರಿನಲ್ಲಿ 2020 ಜನವರಿಯ ವೇಳೆಯಲ್ಲಿ ಸಿಮೆಂಟ್ ದರ 250 ರೂಪಾಯಿಗಳಿಷ್ಟಿತ್ತು. ನವೆಂಬರ್ 2020 ರ ಒಳಗಾಗಿ ಈ ಬೆಲೆಯಲ್ಲಿ ಭಾರಿ ಪ್ರಮಾಣದ ಬದಲಾವಣೆ ಕಂಡುಬಂದಿತು. ಫೆಬ್ರವರಿ 2021 ರ ವೇಳೆಗೆ ಪ್ರತಿ ಚೀಲ ಸಿಮೇಂಟ್ ಬೆಲ 360 ರೂಪಾಯಿಗಳಿಂದ 450 ರೂಪಾಯಿಗಳಷ್ಟು ಏರಿಕೆ ಕಂಡಿದ್ದನ್ನು ಕಾಣಬಹುದಾಗಿದೆ ಎಂದರು.
50 ಕೆಜಿ ಬ್ಯಾಗ್ ಸಿಮೆಂಟ್ ಉತ್ಪಾದನೆಗೆ ಸುಮಾರು 100 ರೂಪಾಯಿಗಳಷ್ಟು ಖರ್ಚಾಗುತ್ತದೆ. ಸಾಗಾಣಿಕೆ ಮತ್ತು ತೆರಿಗೆ ಸೇರಿ ಇದು 200 ರೂಪಾಯಿಗಳಷ್ಟಾಗಬೇಕು. ಆದರೆ, ಬೆಲೆಗಳನ್ನು ನೋಡಿದಲ್ಲಿ ಅನೈತಿಕವಾಗಿ ನಿಯಮಗಳನ್ನು ಗಾಳಿಗೆ ತೂರಿ ಬೆಲೆಗಳನ್ನು ಬೇಕಾಬಿಟ್ಟಿ ಹೆಚ್ಚಿಗೆ ಮಾಡಿರುವುದು ಕಂಡುಬರುತ್ತದೆ. ಇದರ ತನಿಖೆಗೆ ಕೇಂದ್ರ ಸರಕಾರ ಮುಂದಾಗಬೇಕು ಎಂದು ರವೀಂದ್ರ ಆಗ್ರಹಿಸಿದರು.
ಕಾರ್ಯದರ್ಶಿ ಅಬ್ದುಲ್ ಸತ್ತಾರ್ ಮಾತನಾಡಿ ಇನ್ಸೂರೆನ್ಸ್ ಹಾಗೂ ಟೆಲಿಕಾಂ ರೆಗ್ಯೂಲೇಟರಿ ಪ್ರಾಧಿಕಾರಗಳ ರೀತಿಯಲ್ಲಿಯೇ ಸಿಮೆಂಟ್ ಹಾಗೂ ಸ್ಟೀಲ್ ರೇಟ್ ಗಳನ್ನು ನಿಯಂತ್ರಿಸುವ ಪ್ರಾಧಿಕಾರ ರಚನೆ ಆಗಬೇಕು. ಜನವರಿ 2020 ರಲ್ಲಿ ಪ್ರತಿ ಟನ್ ಸ್ಟೀಲ್ ಗೆ 36,000 ರೂಪಾಯಿಗಳಷ್ಟಿತ್ತು. ಫೆಬ್ರವರಿ 2021 ರಲ್ಲಿ ಇದು 50,000 ರೂಪಾಯಿಗಳಿಗೆ ಮುಟ್ಟಿದೆ.
ಈ ರೀತಿ ಅನಿಯಂತ್ರಿತವಾಗಿ ಏರಿಕೆಯಾಗುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಸ್ಟೀಲ್ ರೆಗ್ಯೂಲೇಟರಿ ಅಥಾರಿಟಿಯನ್ನು ರಚಿಸಬೇಕು. ಈ ಮೂಲಕ ಕಚ್ಚಾವಸ್ತುಗಳು ಹಾಗೂ ತೆರಿಗೆಯನ್ನು ಹೆಚ್ಚಿಗೆ ಮಾಡದೇ ಬೆಲೆಗಳನ್ನು ನಿಯಂತ್ರಿಸಬೇಕು ಎಂದು ಹೇಳಿದರು.
ಬಿಐಎ ಆಲ್ ಇಂಡಿಯಾ ಮಾಜಿ ಅಧ್ಯಕ್ಷ ವಿಜಯ ರಾಘವ ರೆಡ್ಡಿ, ಬಿಐಎ ಮಾಜಿ ರಾಜ್ಯಾಧ್ಯಕ್ಷ ಸೋಮೇಶ್ ರೆಡ್ಡಿ, ಮಾಜಿ ಉಪಾಧ್ಯಕ್ಷ. ಸುಬ್ರಮಣಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ನೂರಕ್ಕೂ ಹೆಚ್ಚು ಕಟ್ಟಡ ನಿರ್ಮಾಣ ಕ್ಷೇತ್ರದ ಸದಸ್ಯರು ಹಾಗೂ ಕಟ್ಟಡ ಕಾರ್ಮಿಕರು ಪಾಲ್ಗೊಂಡಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…