ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ: ತನಿಖೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಒತ್ತಾಯ

0
153

ಶಹಾಬಾದ: ರಾಜ್ಯಸಭಾ ಸದಸ್ಯ, ಕಾಂಗ್ರೆಸ್‌ನ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ ಬಂದಿದ್ದು,ಈ ಬಗ್ಗೆ ಸೂಕ್ತ ತನಿಖೆಗೆ ಒಳಪಡಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಒತ್ತಾಯಿಸಿದರು.

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಮಾತನಾಡಿರುವುದಕ್ಕೆ ಖರ್ಗೆ ಅವರಿಗೆ ಬೆದರಿಕೆ ಹಾಕಿರುವುದು ಬಿಜೆಪಿ ಮತ್ತು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇನ್ನೊಂದು ಒಳ ಮುಖ ತೋರಿಸುತ್ತದೆ. ದೇಶದ ಅಭಿವೃದ್ಧಿ ಹಾಗೂ ಒಳಿತಿಗಾಗಿ ಮೋದಿ ವಿರುದ್ಧ ಮಾತನಾಡಿದ ಖರ್ಗೆ ಅವರಿಗೆ ಸೋಮವಾರ ಮಧ್ಯಪ್ರದೇಶದಿಂದ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸುವ ಜತೆಗೆ ಜೀವ ಬೆದರಿಕೆ ಹಾಕಲಾಗಿದೆ.

Contact Your\'s Advertisement; 9902492681

ಈಗಾಗಲೇ ಅನೇಕ ಬಾರಿ ಜೀವ ಬೆದರಿಕೆ ಬಂದಿರುವ ಬಗ್ಗೆ ದೂರು ಸಲ್ಲಿಸಿದರೂ ಸರ್ಕಾರ ಮಾತ್ರ ಯಾವುದೇ ಕ್ರಮಕೈಗೊಂಡಿಲ್ಲ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆಯೇ ರಾಷ್ಟ್ರೀಯ ವರಿ?ರಿಗೆ ಬೆದರಿಕೆ ಕರೆ ಮಾಡುವ ಘಟನೆಗಳು ಕಂಡು ಬರುತ್ತಿವೆ ಎಂದು ಆರೋಪಿಸಿದರು.ರೈತ ವಿರೋಧಿ, ಕೂಲಿ ಕಾರ್ಮಿಕರ ವಿರೋಧಿ ಮಸೂದೆಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಸರಕಾರ ವಿರುದ್ಧ ಖರ್ಗೆ ಧ್ವನಿ ಎತ್ತಬಾರದೇ ಎಂದು ಪ್ರಶ್ನಿಸಿದ ಅವರು, ದೇಶದ ಜನತೆ ಪರವಾಗಿ ಖರ್ಗೆ ಧ್ವನಿ ಎತ್ತಿದರೆ ಬೆದರಿಕೆ ಕರೆ ಬರುವುದು ಹೊಸದೆನಲ್ಲ.

ಈ ಹಿಂದೆ ಅನೇಕ ಬಾರಿ ಇಂತಹ ಕರೆಗಳು ಬಂದಿವೆ. ಪೋಲಿಸ್ ಠಾಣೆಗೆ ದೂರು ದಾಖಲು ಮಾಡಿದ್ದರೂ ಇಲ್ಲಿಯವರೆಗೆ ತನಿಖೆ ನಡೆಸಿ ಅಫರಾದಿಗಳನ್ನು ಪತ್ತೆ ಹಚ್ಚುವಲ್ಲಿ ಬಿಜೆಪಿ ಸರಕಾರ ವಿಫಲವಾಗಿದೆ. ಖರ್ಗೆಗೆ ಅವರಿಗೆ ಜೀವ ಬೇದರಿಕೆ ಹಾಕಿದ ವ್ಯಕ್ತಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here