ಕಲಬುರಗಿ: ಕೇಂದ್ರೀಯ ವಿಶ್ವವಿದ್ಯಾಲಯದಿಂದ ಸ್ಥಾಪಿಸಲು ಉದ್ದೇಶಿಸಲಾಗಿದ್ದ ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರದ ವಿಷಯದಲ್ಲಿ ಕಾಂಗ್ರೆಸ್ ಮತ್ತು ಆಪಕ್ಷದ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಹಾಗೂ ಸತ್ಯವನ್ನು ಮರೆಮಾಚಿ ಸುಳ್ಳನ್ನು ಮುಂದೆ ಮಾಡಿ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರವು ವಿಜ್ಞಾನ ಮತ್ತು ತಂತ್ರಜ್ಞಾನ ಆಧಾರಿತ ಸಂಶೋಧನಾ ಕೇಂದ್ರವಾಗಿದ್ದು ಇಸ್ರೋ ಮತ್ತು ಡಿಆರ್‌ಡಿಒಗಳ ನೆರವಿನಿಂದ ಸಂಶೋಧನಾ ವಿದ್ಯಾರ್ಥಿಗಳು ಹೆಚ್ಚಿನ ರೀತಿಯಲ್ಲಿ ಸಂಶೋಧನೆ ಮಾಡಬಹುದಾಗಿದೆ. ಅಲ್ಲಿ ಯಾವುದೇ ರೀತಿಯ ಯುಜಿ, ಪಿಜಿ ಕೋರ್ಸಗಳನ್ನು ಪ್ರಾರಂಭಿಸುತ್ತಿಲ್ಲ. ಅಲ್ಲದೇ ಆ ಎರಡು ಸಂಸ್ಥೆಗಳ ಕೇಂದ್ರ ಕಚೇರಿಯು ಬೆಂಗಳೂರಿನಲ್ಲಿ ಇರುವುದರಿಂದ ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗೆ ನೆರವಾಗಲಿದೆ. ಆ ಸಂಸ್ಥೆಗಳು ಸಿಯುಕೆಯ ನೆರವಿನೊಂದಿಗೆ ರಕ್ಷಣಾ ಕ್ಷೇತ್ರ ಮತ್ತು ಬಾಹಾಕಾಶ್ಯ ಕ್ಷೇತ್ರದ ಸಂಶೋಧನೆಗೆ ಸಹಕಾರಿಯಾಗಲಿದೆ ಈ ನಿಟ್ಟಿನಲ್ಲಿ ವಿವಿಯು ಇಂತಹದೊಂದು ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
೨೦೧೮ರಲ್ಲಿಯೇ ಈ ಕೇಂದ್ರವು ಬೆಂಗಳೂರಿನಲ್ಲಿ ಆರಂಭಿಸಲು ವಿವಿ ನಿರ್ಧರಿಸಿತ್ತು ಅದಕ್ಕಾಗಿ ಆಗಿನ ರಾಜ್ಯ ಸರ್ಕಾರ ಬೆಂಗಳೂರು ವಿವಿಯಲ್ಲಿ ೧೦ ಏಕರೆ ಜಾಗವನ್ನು ನಿಗದಿಪಡಿಸಲಾಗಿತ್ತು ಆದರೆ ಈ ಕೇಂದ್ರವನ್ನು ಬ್ಯಾಂಕ್ ಸಾಲದೊಂದಿಗೆ ಆರಂಭಿಸಲು ಸಲಹೆ ನೀಡಿದ್ದರಿಂದ ಈ ನಿರ್ಧಾರದಿಂದ ವಿವಿ ಹಿಂದೆ ಸರಿದಿದೆ ಅಲ್ಲದೇ ವಿವಿಯು ಸ್ಪಷ್ಟವಾಗಿ ಹೇಳಿದೆ ಕೇಂದ್ರ ಸರ್ಕಾರ ಸಂಪೂರ್ಣ ಹಣಕಾಸಿನ ನೆರವು ನೀಡಿದರೆ ಮಾತ್ರ ತಾನು ಈ ಕೇಂದ್ರವನ್ನು ಆರಂಭಿಸುತ್ತೇವೆ ಇಲ್ಲದಿದ್ದರೇ ಇಲ್ಲ ಎನ್ನುವುದನ್ನು ನೇರವಾಗಿ ಹೇಳಿದೆ ಎಂದು ಮಾಹಿತಿ ನೀಡಿದ್ದಾರೆ.
ಸೆಂಟರ್ ಆಫ್ ಎಕ್ಸಲೆನ್ಸ್ ಕೇಂದ್ರವು ಕೇವಲ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ಕೇಂದ್ರವಾಗಿರಲಿದೆ ಅಲ್ಲಿ ಯಾವುದೇ ಕೋರ್ಸಗಳನ್ನು ನಡೆಸಲಾಗುವುದಿಲ್ಲ ಇಸ್ರೋ, ಡಿಆರ್‌ಡಿಒ ಸಂಸ್ಥೆಗಳ ಲ್ಯಾಬೋರಟರಿಗಳು ಬೆಂಗಳೂರಿನಲ್ಲಿ ಇರುವುದರಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಂಶೋಧನಾರ್ಥಿಗಳಿಗೆ ಭೇಟಿ ನೀಡಿ ಕಲಿಯಲು ಸಹಾಯಕವಾಗುತ್ತದೆ ಆದರೆ, ಕಾಂಗ್ರೆಸ್ ನಾಯಕರು ಇದರಲ್ಲಿ ಬಿಜೆಪಿಯನ್ನು ಮತ್ತು ಬಿಜೆಪಿಯ ನಾಯಕರನ್ನು ಸುಮ್ಮನೆ ಎಳೆದು ತರುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…