ಕಲಬುರಗಿಯ ಮೂವರಿಗೆ ಹರಿದಾಸ ಅನುಗ್ರಹ ಪ್ರಶಸ್ತಿ ಪ್ರದಾನ

0
29

ಕಲಬುರಗಿ: ಬೆಂಗಳೂರಿನ ಉತ್ತರಾದಿ ಮಠದ ಶ್ರೀ ಸತ್ಯಪ್ರಮೋದ ಕಲ್ಯಾಣ ಮಂಟಪದಲ್ಲಿ ಶ್ರೀನಿವಾಸ ಉತ್ಸವ ಬಳಗ ಗುರುವಾರ ಆಯೋಜಿಸಿದ್ದ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಕಲಬುರಗಿಯ ಮೂವರಿಗೆ “ಹರಿದಾಸ ಅನುಗ್ರಹ ಪ್ರಶಸ್ತಿ” ಪ್ರದಾನ ಮಾಡಿ ಗೌರವಿಸಲಾಯಿತು.

ದಾಸಸಾಹಿತ್ಯ ವಿದ್ವಾಂಸ, ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ವ್ಯಾಸರಾಜ ಸಂತೆಕೆಲ್ಲೂರ,  ವಿಜಯವಾಣಿ  ವರದಿಗಾರ ಶಾಮಸುಂದರ ಕುಲಕರ್ಣಿ, ಸಂಯುಕ್ತ ಕರ್ನಾಟಕ ವರದಿಗಾರ ಎಚ್. ಶೇಷಗಿರಿ ಪ್ರಶಸ್ತಿ ಸ್ವೀಕರಿಸಿದರು. ಉತ್ತರಾದಿ ಮಠದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಂ. ವಿದ್ಯಾಧೀಶಾಚಾರ್ಯ ಗುತ್ತಲ ಅವರು ಪ್ರಶಸ್ತಿ ಪ್ರದಾನ ಮಾಡಿದರು.

Contact Your\'s Advertisement; 9902492681

ಹಿರಿಯ ಪತ್ರಕರ್ತ ಎಸ್.ಕೆ. ಶೇಷಚಂದ್ರಿಕ, ಶ್ರೀನಿವಾಸ ಉತ್ಸವ ಬಳಗದ ಅಧ್ಯಕ್ಷ ವಾದಿರಾಜ ತಾಯಲೂರು, ಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ ಡಾ. ಎಂ.ಆರ್.ವಿ. ಪ್ರಸಾದ್, ಕೋಣನಕುಂಟೆ ಶ್ರೀನಿಧಿ ಶ್ರೀನಿವಾಸ ದೇವಸ್ಥಾನದ ಧರ್ಮದರ್ಶಿ ಡಾ.ಕೆ.ಎಸ್. ಸಮೀರಸಿಂಹ  ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಪುರಂದರದಾಸರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಸಂಗೀತ ಕಲಾಭೂಷಣ ವಿದ್ವಾನ್ ಎಸ್. ಶಂಕರ್ ಮತ್ತು ಶಿಷ್ಯವೃಂದದವರು ಪುರಂದರದಾಸರ ನವರತ್ನಮಾಲಿಕೆ ಕೃತಿಗಳ ಗಾಯನಗೋಷ್ಠಿ ನಡೆಸಿಕೊಟ್ಟರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here