ಕಲಬುರಗಿ: ಬೆಂಗಳೂರಿನ ಉತ್ತರಾದಿ ಮಠದ ಶ್ರೀ ಸತ್ಯಪ್ರಮೋದ ಕಲ್ಯಾಣ ಮಂಟಪದಲ್ಲಿ ಶ್ರೀನಿವಾಸ ಉತ್ಸವ ಬಳಗ ಗುರುವಾರ ಆಯೋಜಿಸಿದ್ದ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಕಲಬುರಗಿಯ ಮೂವರಿಗೆ “ಹರಿದಾಸ ಅನುಗ್ರಹ ಪ್ರಶಸ್ತಿ” ಪ್ರದಾನ ಮಾಡಿ ಗೌರವಿಸಲಾಯಿತು.
ದಾಸಸಾಹಿತ್ಯ ವಿದ್ವಾಂಸ, ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ವ್ಯಾಸರಾಜ ಸಂತೆಕೆಲ್ಲೂರ, ವಿಜಯವಾಣಿ ವರದಿಗಾರ ಶಾಮಸುಂದರ ಕುಲಕರ್ಣಿ, ಸಂಯುಕ್ತ ಕರ್ನಾಟಕ ವರದಿಗಾರ ಎಚ್. ಶೇಷಗಿರಿ ಪ್ರಶಸ್ತಿ ಸ್ವೀಕರಿಸಿದರು. ಉತ್ತರಾದಿ ಮಠದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಂ. ವಿದ್ಯಾಧೀಶಾಚಾರ್ಯ ಗುತ್ತಲ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಹಿರಿಯ ಪತ್ರಕರ್ತ ಎಸ್.ಕೆ. ಶೇಷಚಂದ್ರಿಕ, ಶ್ರೀನಿವಾಸ ಉತ್ಸವ ಬಳಗದ ಅಧ್ಯಕ್ಷ ವಾದಿರಾಜ ತಾಯಲೂರು, ಬೆಂಗಳೂರು ಗಾಯನ ಸಮಾಜದ ಅಧ್ಯಕ್ಷ ಡಾ. ಎಂ.ಆರ್.ವಿ. ಪ್ರಸಾದ್, ಕೋಣನಕುಂಟೆ ಶ್ರೀನಿಧಿ ಶ್ರೀನಿವಾಸ ದೇವಸ್ಥಾನದ ಧರ್ಮದರ್ಶಿ ಡಾ.ಕೆ.ಎಸ್. ಸಮೀರಸಿಂಹ ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಪುರಂದರದಾಸರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಸಂಗೀತ ಕಲಾಭೂಷಣ ವಿದ್ವಾನ್ ಎಸ್. ಶಂಕರ್ ಮತ್ತು ಶಿಷ್ಯವೃಂದದವರು ಪುರಂದರದಾಸರ ನವರತ್ನಮಾಲಿಕೆ ಕೃತಿಗಳ ಗಾಯನಗೋಷ್ಠಿ ನಡೆಸಿಕೊಟ್ಟರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…