ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳು ಉನ್ನತ ಗುರಿ ಇಟ್ಟುಕೊಳ್ಳಬೇಕು ಪ್ರೊ. ಯಾತನೂರ

ಕಲಬುರಗಿ: ನಗರದ ಡಾ. ಅಂಬೇಡ್ಕರ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಎಂ.ಎ. ಎಂ.ಕಾಂ., ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಮುಖ್ಯ ಅತಿಥಿಗಳಾದ ಗುಲಬರ್ಗಾ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನರು ಹಾಗೂ ರಾಜ್ಯಶಾಸ್ತ್ರ ಅಧ್ಯಯನ ಮುಖ್ಯಸ್ಥರಾದ ಪ್ರೊ. ಚಂದ್ರಕಾಂತ ಎಂ. ಯಾತನೂರ ಹೇಳಿದರು.

ವಿದ್ಯಾರ್ಥಿಗಳು ಸಮಾಜದಲ್ಲಿ ನೂರಾರು ಸಮಸ್ಯವಿದೆ ಅದನ್ನು ಕಂಡು ಹಿಡಿಯಬೇಕು ಅಂದಾಗ ಮಾತ್ರ ನಿಮ್ಮ ಜೀವನ ಬಂಗಾರವಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೆ ನಿಮ್ಮ ಭವಿಷ್ಯವನ್ನು ನೀವು ರೂಪಿಸಿಕೊಳ್ಳಬೇಕು. ನಿಮ್ಮ ತಂದೆ ತಾಯಿಗಳು ನಿಮ್ಮ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದನ್ನು ಇಡೇರಿಸಬೇಕಾದರೆ ಸದಾ ಅಧ್ಯಯನ ಅಧ್ಯಾಪನದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಯಾವುದೇ ಒಂದು ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರು ಬರಬೇಕೆಂದರೆ ಅಲ್ಲಿನ ಆಡಳಿತ ಮಂಡಳಿ ಮತ್ತು ಶಿಕ್ಷಕರು ಇರಬೇಕು ಇಂತಹ ಒಳ್ಳೆಯ ಶಿಕ್ಷಕರನನ್ನು ಡಾ. ಅಂಬೇಡ್ಕರ ಕಾಲೇಜು ಹೊಂದಿದೆ ಮತ್ತು ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿದೆ ಎಂದು ಹೇಳುತ್ತ ನಿಮ್ಮ ಭವಿಷ್ಯವನ್ನು ನೀವು ರೂಪಿಸಿಕೊಂಡು ಒಳ್ಳೆಯ ನಾಗರಿಕರಾಗಿ ಕಾಲೇಜಿನ ಕೀರ್ತಿ ತರಬೇಕು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕೆ.ಪಿ.ಇ. ಸಂಸ್ಥೆಯ ಪ್ರಧಾನ ಕಾರ್ಯಾದರ್ಶಿಗಳಾದ ಡಾ. ಮಾರುತಿರಾವ ಡಿ. ಮಾಲೆಯವರು ವಿದ್ಯಾರ್ಥಿಗಳು ಸ್ನಾತಕೋತ್ತರ ಅಧ್ಯಯನವನ್ನು ಕೈಗೊಂಡು ಸಮಾಜದಲ್ಲಿರುವ ಮೂಢ ನಂಬಿಕೆಗಳನ್ನು ಹೊಗಲಾಡಿಸಬೇಕು. ವಿದ್ಯಾರ್ಥಿಗಳು ಒಳ್ಳೆಯ ಅಧ್ಯಯನ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕೆಂದರು.
ಕಾಲೇಜಿನ ಪ್ರಾಚಾಂiiರಾದ ಡಾ. ಐ.ಎಸ್. ವಿದ್ಯಾಸಾಗರ ಸ್ವಾಗತ ಮತ್ತು ಪ್ರಾಸ್ಥಾವಿಕ ಮಾತನಾಡುತ್ತ ಸಾಧನೆ ಎಂಬುದು ಸೋಮಾರಿಯ ಸೊತ್ತಲ್ಲ ಅದು ಸಾಧಕನ ಸೊತ್ತು. ವಿದ್ಯಾರ್ಥಿಗಳೆ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಲು ಎರಡು ವರ್ಷಗಳ ಕಾಲ ತಪಸ್ವಿಯ ರೀತಿಯಲ್ಲಿ ಅಧ್ಯಯನ ಮಾಡಬೇಕೆಂದರು.

ಸಮಾರಂಭದಲ್ಲಿ ಪ್ರೊ. ನಿರ್ಮಲಾ ಸಿರಗಾಪುರ, ಡಾ. ಅಂಬರೀಷ ದೇವರಗುಡಿ, ಪ್ರೊ. ಜ್ಯೋತಿ ರೇಷ್ಮಿ, ಪ್ರೊ. ಮಹಾಂತೇಶ ಬಿದನೂರು, ಡಾ. ಸೋಮಶೇಖರ ವಿದ್ಯಾಸಾಗರ, ಪ್ರೊ. ಶರಣ ಪಾಟೀಲ, ಡಾ. ಶರಣಪ್ಪ ಕಟ್ಟಿ, ಈ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರೊ. ನೀಲಮ್ಮ ಪಾಟೀಲ ಕಾರ್ಯಾಕ್ರಮ ನಿರೂಪಿಸಿದರು. ಪ್ರೊ. ವರ್ಷಾ ಚವ್ಹಾಣ ವಂದಿಸಿದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

7 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

7 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

7 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

7 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

7 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

7 hours ago