ವಾಡಿ: ಬಂಜಾರಾ (ಲಂಬಾಣಿ) ಸೇವಾ ಸಂಘದ ವತಿಯಿಂದ ಫೆ.೧೫ ರಂದು ವಾಡಿ ಪಟ್ಟಣದಲ್ಲಿ ಸಂತ ಶ್ರೀಸೇವಾಲಾಲ ಮಹಾರಾಜ ಅವರ ೨೮೨ನೇ ಜನ್ಮೋತ್ಸವ ಆಚರಿಸಲಾಗುತ್ತಿದೆ. ಅಂದು ಬೆಳಗ್ಗೆ ೯:೩೦ಕ್ಕೆ ಸೇವಾಲಾಲ ನಗರ ತಾಂಡಾದ ಶ್ರೀಸೇವಾಲಾಲ ಹಾಗೂ ಜಗದಂಭಾ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ, ೧೧:೦೦ಕ್ಕೆ ಸಾಂಪ್ರದಾಯಿಕ ಹೋಮ ಹವನ ನಡೆಯಲಿದೆ. ಸಂಸದ ಡಾ.ಉಮೇಶ ಜಾಧವ ಬಹಿರಂಗ ಸಭೆ ಉದ್ಘಾಟಿಸುವರು. ಮಾಜಿ ಶಾಸಕ ವಾಲ್ಮೀಕಿ ನಾಯಕ ಅಧ್ಯಕ್ಷತೆ ವಹಿಸುವರು.
ಇದನ್ನೂ ಸಹ ಓದಿ: ಶಹಾಬಾದ್: ವಿರೋಧ ಪಕ್ಷದ ನಾಯಕರಾಗಿ ಖರ್ಗೆ ಆಯ್ಕೆ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮ
ಮುಗುಳನಾಗಾಂವ ಯಲ್ಲಾಲಿಂಗ ಪುಣ್ಯಾಶ್ರಮದ ಶ್ರೀಜೇಮಸಿಂಗ್ ಮಹಾರಾಜ, ಚಿತ್ತಾಪುರ ಕಂಬಳೇಶ್ವರ ಮಠದ ಶ್ರೀಸೋಮಶೇಖರ ಸ್ವಾಮೀಜಿ, ಹಳಕರ್ಟಿ ಕಟ್ಟಿಮನಿ ಹಿರೇಮಠದ ಶ್ರೀಮುನಿಂದ್ರ ಸ್ವಾಮೀಜಿ, ಗೊಬ್ಬೂರ ಮಠದ ಶ್ರೀಬಳಿರಾಮ ಮಹಾರಾಜ, ಹಳಕರ್ಟಿ ದರ್ಗಾದ ಅಬುತುರಾಬ ಶಹಾ ಖ್ವಾದ್ರಿ, ರೆಸ್ಟ್‌ಕ್ಯಾಂಪ್ ತಾಂಡಾದ ಶ್ರೀಠಾಕೂರ ಮಹಾರಾಜ ಸಾನಿಧ್ಯ ವಹಿಸುವರು.
ಇದನ್ನೂ ಸಹ ಓದಿ: ಶಹಾಬಾದ್: ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ
ರಾಜ್ಯ ದ್ವಿದಳ ದಾನ್ಯ ನಿಗಮದ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ, ಬಂಜಾರಾ ಸೇವಾ ಸಂಘದ ರಾಜ್ಯಾಧ್ಯಕ್ಷ ರಾಮಚಂದ್ರ ಜಾಧವ, ಎಸಿಸಿ ಕಾರ್ಮಿಕ ಸಂಘದ ಅಧ್ಯಕ್ಷ ಶಿವಾಜಿ ಕೋಮಟೆ, ಎಸಿಸಿ ಘಟಕ ಮುಖ್ಯಸ್ಥ ಸೀತಾರಾಮುಲು ಸಿ.ಎಚ್, ಜಿಪಂ ಸದಸ್ಯ ಅರವಿಂದ ಚವ್ಹಾಣ, ಪುರಸಭೆ ಅಧ್ಯಕ್ಷೆ ಝರೀನಾಬೇಗ ಅತಿಥಿಗಳಾಗಿ ಪಾಲ್ಗೊಳ್ಳುವರು. ಬೈಕ್ ರ‍್ಯಾಲಿ ಹಾಗೂ ಮೆರವಣಿಗೆ ರದ್ಧುಪಡಿಸಲಾಗಿದೆ ಎಂದು ಬಂಜಾರಾ ಸಮಾಜದ ಅಧ್ಯಕ್ಷ ಶಿವರಾಮ ಪವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…