ವಿಜಯಪುರ: ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಮಮದಾಪುರ ಗ್ರಾಮದ ಸರಕಾರಿ ಶಾಲೆಯಲ್ಲಿ ಬಿ ಎಂ ಪಾಟೀಲ ಫೌಂಡೇಶನ್ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಾಲೆಗೆ ಬನ್ನಿ ವತಿಯಿಂದ ಆಯೋಜಿಸಿದ ಓನ್ -ಚಾಟ್ ಕಾರ್ಯಕ್ರಮ ಮತ್ತು ಕೋಟಿ ವೃಕ್ಷ ಅಭಿಯಾನದ ಸಹಯೋಗ ಅಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಯಿತು.
ಫೌಂಡೇಶನ್ ಅಧ್ಯಕ್ಷ ಹಾಗೂ ಯುವ ನಾಯಕ ಬಸನಗೌಡ .ಎಂ.ಪಾಟೀಲರು ಕಾರ್ಯಕ್ರಮ ಉದ್ಘಾಟಿಸಿದ್ದು, ಅಥಣಿಯ ಗಚ್ಚಿನಮಠದ ಪೂಜ್ಯ ಶ್ರೀ ಅಭಿನವ ಮುರಘೇಂದ್ರ ಮಹಾಸ್ವಾಮಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ರೂಪಾ ಆಗಮಿಸಿ,ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಬಸನಗೌಡ. ಎಂ. ಪಾಟೀಲ ವಿದ್ಯಾರ್ಥಿಗಳ ಪ್ರಶ್ನೋತ್ತರಗಳಿಗೆ ಉತ್ತರ ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿ ಕಲಿಕೆಯ ಉತ್ಸಾಹ ಪ್ರೇರೆಪಿಸಿದರು. ಈ ಕಾರ್ಯಕ್ರಮದ ವೇದಿಕೆ ಮೇಲೆ ಶಾಲೆಯ ಮುಖ್ಯ ಗುರುಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…