ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಸ್ಥಾನಮಾನ ಸಿಗುತ್ತದೆ: ಶಾಸಕ ಮತ್ತಿಮಡು

0
210

ಶಹಾಬಾದ: ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಸ್ಥಾನಮಾನ ಸಿಗುತ್ತದೆ ಎಂಬುದಕ್ಕೆ ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡ ಕನಕಪ್ಪ ದಂಡಗುಲಕರ್ ಅವರೇ ಸಾಕ್ಷಿ ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಅವರು ಸೋಮವಾರ ನಗರದಲ್ಲಿ ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಆಯೋಜಿಸಲಾದ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಆಗಮಿಸಿ ಮಾತನಾಡಿದರು.

Contact Your\'s Advertisement; 9902492681

ಸುಮಾರು ಮೂರು ದಶಕಗಳಿಂದ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಕನಕಪ್ಪ ಅವರ ಶ್ರಮ ಸಾಕಷ್ಟಿದೆ.ಅಲ್ಲದೇ ಪಕ್ಷಕ್ಕಾಗಿ ದುಡಿದ ಇವರಿಗೆ ಈ ಹಿಂದೆಯೇ ಸ್ಥಾನಮಾನ ದೊರಕಬೇಕಿತ್ತು.ವಿಳಂಬವಾದರೂ ಅವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಿದೆ.ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಜನಪರವಾದ ಕೆಲಸ ಮಾಡುವ ಮೂಲಕ ಶಹಾಬಾದ ನಗರವನ್ನು ಅಭಿವೃದ್ಧಿಪಡಿಸುವಲ್ಲಿ ಕೈಲಾದ ಸೇವೆ ಮಾಡಬೇಕೆಂದು ತಿಳಿಸಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ಪಕ್ಷ ನೀಡಿದ ಸ್ಥಾನಕ್ಕೆ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೆವೆ.ಅಲ್ಲದೇ ಯಾವುದೇ ಮನೆ ನಿರ್ಮಾಣ ಮಾಡಬೇಕಾದರೆ ಅವರ ಅಂಗಳದಲ್ಲಿ ಎರಡು ಮರಗಳನ್ನು ನೆಡುವ ತೀರ್ಮಾಣ ತೆಗೆದುಕೊಂಡು ನಗರವನ್ನು ಹಸಿರುಮಯ ಮಾಡಲು ಪ್ರಯ್ತನಿಸುತ್ತೆನೆ.ಮನೆಯ ಮುಂದೆ ಗಿಡಮರಗಳನ್ನು ಬೆಳೆದರೇ ಮಾತ್ರ ಪರವಾನಗಿ ನೀಡಲಾಗುವುದು ಎಂಬ ನಿಯಮ ತಂದರೆ ಮಾತ್ರ ನಗರದಲ್ಲಿ ಉತ್ತಮ ವಾತಾವರಣ ಮೂಡಲಿದೆ ಎಂದರು.

ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಪಾಟೀಲ, ಇಂಧನ ಅಭಿವೃದ್ಧಿ ನಿಗಮದ ನಿರ್ದೇಶಕ ಮಂಡಳಿ ಅಧ್ಯಕ್ಷ ಚಂದು ಪಾಟೀಲ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಕೃಷ್ಣ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗಿರಥಿ ಗುನ್ನಾಪೂರ, ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಶರ್ಮಾ, ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಸದಸ್ಯರಾದ ಬಸವರಾಜ ಬಿರಾದಾರ, ರಾಜು ಮಕ್ಕಣ್ಣ, ಲತಾ ಸಂಜೀವ ಅಗಸ್ಟೀನ್ ಸೇರಿದಂತೆ ಅನೇಕ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here