ಕಲಬುರಗಿ: ಕಲಬುರಗಿ ಜಿಲ್ಲೆಯ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರ ಇ-ಕೆವೈಸಿ ತಕ್ಷಣದಿಂದ ನಿಲ್ಲಿಸಬೇಕೆಂದು ಜಿಲ್ಲೆಯ ಎಲ್ಲಾ ತಹಶೀಲ್ದಾರರು ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಕಲಬುರಗಿ ಅಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಹಿರಿಯ ಉಪನಿರ್ದೇಶಕರಾದ ಡಾ. ಕೆ. ರಾಮೇಶ್ವರಪ್ಪ ಸೂಚಿಸಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಿಸುವುದನ್ನು ಮುಂದಿನ ಸೂಚನೆವರೆಗೆ ತಕ್ಷಣದಿಂದಲೇ ಸ್ಥಗಿತಗೊಳಿಸಲು ನಿರ್ದೇಶಿಸಿದ್ದು, ಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳು ಈ ನಿರ್ದೇಶನವನ್ನು ತಕ್ಷಣವೇ ಕಟ್ಟುನಿಟ್ಟಾಗಿ ಪಾಲಿಸಬೇಕು.
2019 ಜೂನ್ ಮಾಹೆಯ ಪಡಿತರ ವಿತರಣೆಯನ್ನು ಅತ್ಯಂತ ತುರ್ತಾಗಿ ಮುಕ್ತಾಯಗೊಳಿಸಲು ಎಲ್ಲಾ ಆಹಾರ ಶಿರಸ್ತೇದಾರರು, ನಿರೀಕ್ಷಕರು ಕ್ರಮಕೈಗೊಳ್ಳಬೇಕು. ಈ ಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಎಲ್ಲಾ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರಕಟಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Super