ಕೆಂಭಾವಿ: ದೇಶಕ್ಕೆ ಶ್ರೇಷ್ಠ ಸಂವಿಧಾನ ಗ್ರಂಥವನ್ನು ರಚಿಸಿಕೊಟ್ಟ ಮಹಾ ಯುಗ ಪುರುಷ,ಸಮಾಜದ ಸಮಾನತೆ ಸ್ವಾತಂತ್ರ್ಯ ಹಾಗೂ ಮಹಿಳೆಯರ ಸ್ಥಾನಮಾನಕ್ಕಾಗಿ ಹಗಲಿರುಳು ಹೋರಾಟ ಮಾಡಿದವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರು ಎಂದು ಸಾಹಿತಿ ವಿಠ್ಠಲ್ ಚವಾಣ್ ಹೇಳಿದರು.
ನಗರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಡಾ.ಬಾಬಾಸಾಹೇಬ ಅಂಬೇಡ್ಕರ್ ರವರ ಪುಸ್ತಕ ಓದು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಇಂತಹ ಪುಸ್ತಕಗಳನ್ನು ಓದುವ ಮೂಲಕ ಅವರ ವಿಚಾರಧಾರೆಗಳ ಜೊತೆಗೆ,ಸಮಗ್ರ ಸಂವಿಧಾನದ ಕುರಿತು ಅರಿತುಕೊಂಡು ಅಲ್ಲದೆ ಅವರ ಆದರ್ಶ ತತ್ವಗಳು ಜೀವನದಲ್ಲಿ ಅಳವಡಿಸಿಕೊಂಡು ಬದುಕು ಸಾಗಿಸಬೇಕಾಗಿದೆ ಎಂದು ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೆಂಕನಗೌಡ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಓದುವ ಅಭಿರುಚಿ ಬೆಳೆಸಿಕೊಳ್ಳುವ ಹಿನ್ನೆಲೆಯಲ್ಲಿ ಇಲಾಖೆ ಇಂಥಹ ಕಾರ್ಯಕ್ರಮ ಮೇಲಿಂದ ಮೇಲೆ ಆಯೋಜಿಸಲಾಗುತ್ತಿದೆ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಮುಂದೆ ಅವರ ಜೀವನದಲ್ಲಿ ಉನ್ನತ ಸ್ಥಾನವನ್ನು ಗಳಿಸುವಲ್ಲಿ ಯಶಸ್ಸುಗಳಿಸಬೇಕು ಎಂದು ಹೇಳಿದರು.
ಕಾಲೇಜಿನ ಉಪನ್ಯಾಸಕಿ ಶಕುಂತಲಾ ಹಡಗಲಿ ಮಾತನಾಡಿ ಸಮಾಜದಲ್ಲಿ ಮಹಿಳೆಯರಿಗೂ ಸಮಾನತೆ ಸ್ಥಾನಮಾನ ನೀಡಬೇಕು ತಂದೆಯ ಆಸ್ತಿಯಲ್ಲಿ ಸಮಪಾಲು ಸಮಬಾಳು ನೀಡಬೇಕು ಎಂದು ಸಮಾನವಾದ ಹಕ್ಕು ಹಾಗೂ ಪ್ರಾತಿನಿಧ್ಯತೆಯನ್ನು ನೀಡಿದ ಇದು ಪುರುಷ ಅಂಬೇಡ್ಕರ್ ಎಂದು ಅವರ ಸಾಧನೆಯನ್ನು ಬಣ್ಣಿಸಿದರು.ಕಾಲೇಜಿನಲ್ಲಿ ಆಯೋಜಿಸಿರುವ ಪ್ರಬಂಧ ಸ್ಪರ್ಧೆಯಲ್ಲಿ ಕುಮಾರಿ ರೇಣುಕಾ,ಪ್ರಥಮ ಶ್ರೀದೇವಿ ಗುರಣ್ಣ,ದ್ವಿತೀಯ ಸ್ಫೂರ್ತಿ ತೃತೀಯ ಸ್ಥಾನ ಪಡೆದರು ನಂತರ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಅಂಬೇಡ್ಕರ್ ಪುಸ್ತಕವನ್ನ ಬಹುಮಾನ ರೂಪದಲ್ಲಿ ನೀಡಿ ಗೌರವಿಸಲಾಯಿತು.
ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಮಡಿವಾಳಪ್ಪಗೌಡ ಪೊಲೀಸ್ ಪಾಟೀಲ್, ಕಾರ್ಯಕ್ರಮ ಉದ್ಘಾಟಿಸಿದರು. ಈ ಸಮಾರಂಭದ ವೇದಿಕೆ ಮೇಲೆ ಮಡಿವಾಳಪ್ಪಗೌಡ ಪೊಲೀಸ್ ಪಾಟೀಲ್ ಹೆಗ್ಗಣದೊಡ್ಡಿ,ಪ್ರಾಂಶುಪಾಲರಾದ ಎಲ್.ಪಿ.ರಾಠೋಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು.ಕಾಲೇಜಿನ ಕನ್ನಡ ಉಪನ್ಯಾಸಕರಾದ ರವೀಂದ್ರ ಕುಮಾರ್,ಹಾಗೂ ವಾಣಿಜ್ಯ ಉಪನ್ಯಾಸಕರಾದ ಉತ್ತಮ್ ಕುಮಾರ್ ಅವರು ಅಂಬೇಡ್ಕರ್ ಪುಸ್ತಕ ಓದು ಕಾರ್ಯಕ್ರಮದ ನಿಮಿತ್ಯ ಹಮ್ಮಿಕೊಂಡಿರುವ ಪ್ರಬಂಧ ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ್ದರು.ಕಾರ್ಯಕ್ರಮ ಕೌಸರ್ ಬಾನು ನಿರೂಪಿಸಿದರು ವಿದ್ಯಾಶ್ರೀ ಸ್ವಾಗತಿಸಿದರು ಶಕುಂತಲಾ ಹಡಗಲಿ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…