ಕಲಬುರಗಿ: ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಹಾಗೂ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಕಲಬುರಗಿಯ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಫೆಬ್ರವರಿ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನಿರುದ್ಯೋಗ ಸಮಸ್ಯೆ: ಎಐಡಿವೈಒ ಸಹಿ ಸಂಗ್ರಹ 18 ರಂದು
ಈ ಉದ್ಯೋಗ ಮೇಳದಲ್ಲಿ ರಾಜ್ಯದ 10ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಬಿ.ಫಾರ್ಮಾ, ಎಂ.ಹೆಚ್.ಎ. ಇಂಜಿನಿಯರಿಂಗ್ (ಸಿವಿಲ್ ಬ್ರ್ಯಾಂಚ್ ಹೊರತುಪಡಿಸಿ) ಹಾಗೂ ಪದವೀಧರ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.
ಎಸಿಸಿ ಕಾರ್ಖಾನೆ ವಿರುದ್ಧ ಸಿಡಿದೆದ್ದ ಲಾರಿ-ಟ್ರಾನ್ಸ್‌ಪೋರ್ಟ್ ಮಾಲೀಕರು: ಸಿಮೆಂಟ್ ಸಾಗಾಣಿಕೆ ತಡೆಯುವ ಎಚ್ಚರಿಕೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…