ಬಿಸಿ ಬಿಸಿ ಸುದ್ದಿ

ಕೆಲವೇ ದಿನಗಳಲ್ಲಿ ವಿಸ್ಟ್ರಾನ್‌ ಕಂಪನಿಯ ಉತ್ಪಾದನೆ ಪುನರಾರಂಭ: ಸಚಿವ ಜಗದೀಶ್‌ ಶೆಟ್ಟರ್‌

ಬೆಂಗಳೂರು: ಕೋಲಾರದ ವಿಸ್ಟ್ರಾನ್‌ ಕಂಪನಿಯು ಇನ್ನು ಕೆಲವೇ ದಿನಗಳಲ್ಲಿ ಉತ್ಪಾದನಾ ಕಾರ್ಯವನ್ನು ಪುನರಾರಂಭಿಸಲಿರುವುದು ಸಂತಸದ ವಿಷಯ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ವಿಧಾನಸೌಧದಲ್ಲಿಂದು ಸಚಿವರನ್ನು ಭೇಟಿ ಮಾಡಿದ ವಿಸ್ಟ್ರಾನ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶದ ಸುದಿಪ್ತೋ ಗುಪ್ತಾ ನೇತೃತ್ವದ ತಂಡ, ಸಂಕಷ್ಟದ ಸಮಯದಲ್ಲಿ ರಾಜ್ಯ ಸರಕಾರದ ಅದರಲ್ಲೂ ಕೈಗಾರಿಕಾ ಇಲಾಖೆಯ ವತಿಯಿಂದ ದೊರೆತ ಸಹಾಯಕ್ಕೆ ಧನ್ಯವಾದಗಳನ್ನು ತಿಳಿಸಿದರು. ಇದೇ ವೇಳೆ ವಿಸ್ಟ್ರಾನ್‌ ನಲ್ಲಿ ಮರು ನೇಮಕಾತಿಯನ್ನು ಪ್ರಾರಂಭಿಸಲಾಗಿದೆ. ಅಲ್ಲದೆ ಕಂಪನಿಯಲ್ಲಿ ಉತ್ಪಾದನೆಗೆ ಬೇಕಾಗಿರುವ ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಉತ್ಪಾದನಾ ಕಾರ್ಯ ಸದ್ಯದಲ್ಲೇ ಪುನರಾರಂಭವಾಗಲಿದೆ ಎಂದು ಹೇಳಿದರು.

ನಂತರ ಮಾತನಾಡಿದ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಜಗದೀಶ್‌ ಶೆಟ್ಟರ್‌, ಅಂತಹ ಘಟನೆ ನಡೆದಿದ್ದು ಬಹಳ ವಿಷಾಧನೀಯ. ಆದರೆ, ಕೈಗಾರಿಕಾ ಸ್ನೇಹೀ ರಾಜ್ಯವಾಗಿರುವ ಕರ್ನಾಟಕ ರಾಜ್ಯ ಮೊದಲಿನಿಂದಲೂ ಕೈಗಾರಿಕೆಗಳಿಗೆ ಪೂರಕ ವಾತಾವರಣವನ್ನು ನಿರ್ಮಿಸಲು ಶ್ರಮಿಸುತ್ತಿದೆ.

ನರೋಣಾ ಪೊಲೀಸರ ಕಾರ್ಯಾಚರಣೆ: ಕಳ್ಳ ಅಣ್ಣತಮ್ಮಂದಿಬ್ಬರು ಅಂದರ್

ಆ ಘಟನೆಯ ನಂತರ ಮರು ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿರುವುದು ಹಾಗೂ ಉತ್ಪಾದನೆ ಪುನರಾರಂಭಕ್ಕೆ ಸಿದ್ದತೆ ನಡೆಸಿರುವುದು ಸಂತಸದ ವಿಷಯವಾಗಿದೆ. ರಾಜ್ಯ ಸರಕಾರ ಹಾಗೂ ಕೈಗಾರಿಕಾ ಇಲಾಖೆಯ ವತಿಯಿಂದ ಎಲ್ಲಾ ರೀತಿಯ ಸಹಕಾರವನ್ನು ಮುಂದುವರೆಸಲಾಗುವುದು ಎಂದರು. ಅಲ್ಲದೆ, ರಾಜ್ಯದ ಇತರೆ ಜಿಲ್ಲೆಗಳಲ್ಲೂ ಉದ್ಯೋಗ ನೇಮಕಾತಿ ಮಾಡಿಕೊಳ್ಳುವ ಸಲಹೆಯನ್ನು ನೀಡಿದರು.

ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್‌ ಕೃಷ್ಣ ಹಾಗೂ ವಿಸ್ಟ್ರಾನ್‌ ಕಂಪನಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಭೀಮ್ ಆರ್ಮಿ ಆಗ್ರಹ

sajidpress

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

58 seconds ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago