ಕೋವಿಡ್ ಲಸಿಕೆಗಳು ಸಂಪೂರ್ಣ ಸುರಕ್ಷಿತ,ಯಾರೂ ಭಯಪಡಬೇಕಿಲ್ಲ: ಡಿಸಿ

2
34

ಕಲಬುರಗಿ; ಕೋವಿಡ್ ನಿರ್ಮೂಲನೆಗಾಗಿ ನೀಡಲಾಗುತ್ತಿರುವ ಲಸಿಕೆಗಳು ಸಂಪೂರ್ಣ ಸುರಕ್ಷತೆಯಿಂದ ಕೂಡಿದ್ದು, ಯಾರೂ ಕೂಡ ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಅವರು ಧೈರ್ಯ ತುಂಬಿದರು.

ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ಕೋವಿಡ್ ವ್ಯಾಕ್ಸಿನ್ ಕುರಿತು ಮಾಧಮದವರಿಗಾಗಿ ಅಯೋಜಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಕೋವಿಡ್ ಲಸಿಕೆಗಳ ಬಗ್ಗೆ ಜನರಲ್ಲಿ ಗೊಂದಲಗಳಿವೆ. ಅದನ್ನು ಹೋಗಲಾಡಿಸುವ ಜವಾಬ್ದಾರಿ ವೈದ್ಯರದ್ದಾಗಿದೆ. ಲಸಿಕೆ ಪಡೆಯುವುದಕ್ಕೆ ಹಿಂದೇಟು ಹಾಕಬಾರದು, ಆರೋಗ್ಯ ಸಿಬ್ಬಂದಿಗಳು ಹಾಗೂ ವಿವಿಧ ಇಲಾಖೆಯ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಕೋವಿಡ್ ಲಸಿಕೆ ಪಡೆಯುವ ಮೂಲಕ ಮಾದರಿಯಾಗಬೇಕು ಎಂದು ಅವರು ಸಲಹೆ ನೀಡಿದರು.

ಬೀದಿ ನಾಟಕ ತರಬೇತಿ ಶಿಬಿರಕ್ಕೆ ಚಾಲನೆ

ನಾನು ಕೂಡ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದಿದ್ದು, ನನಗೆ ಯಾವುದೇ ಅಡ್ಡಪರಿಣಾಮಗಳು ಕಾಣಿಸಿಕೊಳ್ಳಲಿಲ್ಲ ಎಂದು ಸ್ವತ: ತಮ್ಮನ್ನೇ ಜಿಲ್ಲಾಧಿಕಾರಿಗಳು ಉದಾಹರಣೆಯಾಗಿ ನೀಡಿದರು.

ಜನವರಿ 30ರ ವರೆಗೆ ಸರ್ಕಾರಿ ವಲಯದಲ್ಲಿ ಶೇ. 53 ರಷ್ಟು ಹಾಗೂ ಖಾಸಗಿ ವಲಯದಲ್ಲಿ ಕೇವಲ ಶೇ. 15ರಷ್ಟು ಅರೋಗ್ಯ ಸಿಬ್ಬಂದಿಗಳು ಮಾತ್ರ ಕೋವಿಡ್ ಲಸಿಕೆ ಪಡೆದಿದ್ದರು. ಲಸಿಕೆ ಕುರಿತು ಅರೋಗ್ಯ ಸಿಬ್ಬಂದಿಗಳಿಗೆ ಅರಿವು ಮೂಡಿಸಲು ಅರೋಗ್ಯ ಇಲಾಖೆ ಹಾಗೂ ಖಾಸಗಿ ವಲಯದ ವೈದ್ಯರೊಂದಿಗೆ ಸಭೆ ನಡೆಸಿದರ ಪರಿಣಾಮ ಫೆ.17 ರ ವರೆಗೆ ಜಿಲ್ಲೆಯಲ್ಲಿ ಸರ್ಕಾರಿ ವಲಯದಲ್ಲಿ ಶೇ. 71 ರಷ್ಟು ಹಾಗೂ ಖಾಸಗಿ ವಲಯದಲ್ಲಿ ಶೇ.40 ರಷ್ಟು ವ್ಯಾಕ್ಸಿನೆಷನ್ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ 21,810 ಕೋವಿಡ್ ಲಸಿಕೆ ಗುರಿ ಹೊಂದಲಾಗಿದ್ದು, ಇದುವರೆಗೆ 12,464 ಜನರು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಶೇಕಡ 57ರಷ್ಟು ಗುರಿ ಸಾಧಿಸಲಾಗಿದೆ ಎಂದು ಅವರು ವಿವರಿಸಿದರು.

ಕೋವಿಡ್ ಲಸಿಕೆ ಪಡೆದ ನಂತರ ಸಣ್ಣ ಪ್ರಮಾಣದ ಜ್ವರ, ತಲೆನೋವಿನಂತಹ ಸಮಸ್ಯೆಗಳು ಬಿಟ್ಟರೆ ಯಾವುದೇ ದೊಡ್ಡ ಪ್ರಮಾಣದ ಅಡ್ಡಪರಿಣಾಮ ಇಲ್ಲಿಯವರೆಗೂ ಕಂಡು ಬಂದಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಸಣ್ಣ ಜ್ವರ, ಮೈ-ಕೈ ಹಾಗೂ ತಲೆನೋವು ಕಾಣಿಸಿಕೊಂಡರೆ ಪ್ಯಾರಸಿಟಮಾಲ್ ಮಾತ್ರೆ ಸೇವಿಸಬೇಕು ಎಂದು ಅವರು ತಿಳಿಸಿದರು.

ಕಾಯಕ, ದಾಸೋಹ ಶರಣರು ಜಗತ್ತಿಗೆ ಕೊಟ್ಟ ಬಹುದೊಡ್ಡ ಕೊಡುಗೆ: ಡಾ. ಶಾಂತಾ ಅಷ್ಟಗಿ

ಕಲಬುರಗಿ ಜಿಲ್ಲೆಯಲ್ಲಿ ಸಂಪೂರ್ಣ ಕೋವಿಶಿಲ್ಡ್ ಲಸಿಕೆ ಮಾತ್ರ ನೀಡಲಾಗುತ್ತಿದ್ದು, ಮೊದಲ ಡೋಸ್ ತೆಗೆದುಕೊಂಡ 28 ದಿನಗಳ ಬಳಿಕ 2ನೇ ಡೋಸ್ ತೆಗೆದುಕೊಳ್ಳಬೇಕು. ಶೀಘ್ರದಲ್ಲಿ 3ನೇ ಹಂತದಲ್ಲಿ ಕೋವಿಡ್ ವ್ಯಾಕ್ಸಿನ್ ನೀಡುವ ಕಾರ್ಯಾರಂಭವಾಗಲಿದೆ. 18 ವರ್ಷ ಮೇಲ್ಪಟ್ಟವರಿಗೆ ಹಾಗೂ 50 ವರ್ಷ ದಾಟಿದ ನಾಗರೀಕರಿಗೆ ಕೋವಿಡ್ ಲಸಿಕೆ ವಿತರಿಸಲಾಗುವುದು. ಸಾರ್ವಜನಿಕರು ಭಯ ಪಡದೆ ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರ ಡಾ.ದಿಲೀಶ್ ಸಾಸಿ ಅವರು ಮಾತನಾಡಿ, ದೇಶದಲ್ಲಿ ಈ ಮುಂಚೆ ಪೋಲಿಯೋ, ಸಿಡುಬು ನಂತಹ ಮಾರಕ ಕಾಯಿಲೆಗಳು ಬಂದಿವೆ. ಅವುಗಳನ್ನು ನಿಯಂತ್ರಣ ಮಾಡಲು ತೆಗೆದುಕೊಂಡಂತಹ ಕ್ರಮಗಳನ್ನೇ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಪೋಲಿಯೋ, ಸಿಡುಬು ಮುಕ್ತ ದೇಶವಾದಂತೆಯೇ ಕೋವಿಡ್ ಮುಕ್ತ ದೇಶಕ್ಕೆ ಸಾರ್ವಜನಿಕರು ಸಹಕರಿಸÀಬೇಕು ಎಂದು ಅವರು ಮನವಿ ಮಾಡಿದರು.

ಉದ್ಯೋಗಕ್ಕಾಗಿ ಆಗ್ರಹಿಸಿ ಎಐಡಿವೈಒ ಸಹಿ ಸಂಗ್ರಹ ಚಳುವಳಿ

ಯಾರು ಕೋವಿಡ್ ಲಸಿಕೆ ಪಡೆಯಬಹುದು: ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳನ್ನು 18 ವರ್ಷ ಮೇಲ್ಪಟ್ಟ ಎಲ್ಲರೂ ಪಡೆಯಬಹುದು. ಹೆಚ್.ಐ.ವಿ, ಕಿಡ್ನಿಸ್ಟೋನ್, ಅಸ್ತಮಾ, ಲೋ ಬಿ.ಪಿ., ಥೈರಾಯಿಡ್, ಸಕ್ಕರೆ ಕಾಯಿಲೆಯಂತಹ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಗಳು ಲಸಿಕೆ ಪಡೆದ ನಂತರವೂ ಮಾತ್ರೆಗಳನ್ನು ಸೇವಿಸಬಹುದಾಗಿದೆ.

ಯಾರು ಲಸಿಕೆ ಪಡೆಯಬಾರದು: ಗರ್ಭಿಣಿಯರು, ಬಾಣಂತಿಯರು, 18 ವರ್ಷದೊಳಗಿನ ಮಕ್ಕಳು ಹಾಗೂ ಕೋವಿಡ್ ಲಸಿಕೆ ಪಡೆದು ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಗಳು ಲಸಿಕೆ ಪಡೆಯುವಂತಿಲ್ಲ. ಟಿ.ಟಿ. ಇಂಜೆಕ್ಷನ್ ಪಡೆದವರು 14 ವಾರಗಳ ಕಾಲ, ಕೊರೋನಾ ಪೀಡಿತರು 8 ವಾರಗಳ ಕಾಲ ಹಾಗೂ ಜ್ವರ, ಕೆಮ್ಮು, ನೆಗಡಿಯಂತಹ ಅರೋಗ್ಯ ಸಮಸ್ಯೆ ಕಂಡು ಬಂದರೆ 4 ದಿನಗಳವರೆಗೆ ಲಸಿಕೆ ಪಡೆಯುವಂತಿಲ್ಲ.

ಜಿಮ್ಸ್ ಆಸ್ಪತ್ರೆಯ ಕೋವಿಡ್ ನೋಡಲ್ ಅಧಿಕಾರಿ ಡಾ. ಗುರುರಾಜ ಅವರು ಕೋವಿಡ್ ಲಸಿಕೆ ಹಾಗೂ ಅದರ ಸಾಧಕ-ಭಾದಕಗಳ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿದರು.

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಭೀಮ್ ಆರ್ಮಿ ಆಗ್ರಹ

ಈ ಕಾರ್ಯಾಗಾರದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಪ್ರಭುಲಿಂಗ್ ಮಾನಕರ್, ವಿವಿಧ ಮಾಧ್ಯಮಗಳ ಪ್ರತಿನಿಧಿಗಳು ಹಾಗೂ ಅರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here