ಶಹಾಬಾದ: ತೊನಸನಹಳ್ಳಿ(ಎಸ್) ಗ್ರಾಪಂ ಪಿಡಿಓ ಅವರು ಗ್ರಾಪಂ ಹಣವನ್ನು ದುರ್ಬಳಕೆ ಹಾಗೂ ಅವ್ಯವಹಾರ ಮಾಡಿದ್ದು, ಅದರ ಬಗ್ಗೆ ತನಿಖೆ ನಡೆಸಬೇಕೆಂದು ಗ್ರಾಪಂ ಸದಸ್ಯ ಮಹ್ಮದ್ ಫಯಾಜ್ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.
ತೊನಸನಹಳ್ಳಿ(ಎಸ್) ಗ್ರಾಪಂ ಪಿಡಿಓ ಪ್ರಕಾಶ ಬಾಬು ಅವರು ೯ ತಿಂಗಳುಗಳಿಂದ ನಮ್ಮ ಗ್ರಾಪಂಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ೧೪ನೇ ಮತ್ತು ೧೫ನೇ ಹಣಕಾಸು ಯೋಜನೆ ಹಾಗೂ ಮನೆ ಕರ ವಸೂಲಿಯ ಖಾತೆಗಳಿಂದ ಲಕ್ಷಾಂತರ ಹಣ ಅವ್ಯವಹಾರ ಮಾಡಿದ್ದಾರೆ.ಈವರೆಗೆ ಅವರು ಯೋಜನೆಗಳಲ್ಲಿ ಖರ್ಚು ಮಾಡಿದ ವಿವರ ಕೇಳಿದರೂ ನೀಡುತ್ತಿಲ್ಲ.
ಅಲ್ಲದೇ ಫೆಬ್ರವರಿ ೪ ರಂದು ಅವರಿಗೆ ಕರೆ ಮಾಡಿದರೇ, ಅವರು ರಜೆಯಲ್ಲಿ ಇರುವುದಾಗಿ ತಿಳಿಸಿದ್ದಾರೆ.ಆದರೆ ಅದೇ ದಿನದಂದು ಲಕ್ಷಾಂತರ ರೂ. ಬ್ಯಾಂಕಿನಿಂದ ಡ್ರಾ ಮಾಡಿಕೊಂಡಿದ್ದಾರೆ.ಅಲ್ಲದೇ ಅಂಗವಿಕಲರಿಗೆ ನೀಡಬೇಕಾದ ಯಾವುದೇ ಸವಲತ್ತುಗಳು ಇಂದಿಗೂ ನೀಡಿಲ್ಲ.ಆದರೆ ಅದರ ಹಣವನ್ನು ಬಳಸಿಕೊಳ್ಳಲಾಗಿದೆ.
ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರು ಭರ್ತಿ ಮಾಡುತ್ತಿಲ್ಲ: ಜಗನ್ನಾಥ.ಎಸ್.ಹೆಚ್
ಆದ್ದರಿಂದ ಕೂಡಲೇ ಈ ಬಗ್ಗೆ ತನಿಖೆ ನಡೆಸಿ, ದುರುಪಯೋಗಪಡಿಸಿಕೊಂಡ ಹಣವನ್ನು ಮತ್ತೆ ಸರ್ಕಾರಕ್ಕೆ ಜಮಾ ಮಾಡಬೇಕು.ಅಂಗವಿಕಲರ ಸೌಲಭ್ಯಗಳನ್ನು ನೀಡಬೇಕು.ಇಲ್ಲದಿದ್ದರೇ ಪ್ರತಿಭಟನೆ ಹಮ್ಮಿಕೊಳ್ಳುತ್ತೆವೆ ಎಂದು ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…