ಕಲಬುರಗಿ: ಗ್ರಾಮೀಣ ಜನರ ಹತ್ತು-ಹಲವಾರು ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡಲು ರಾಜ್ಯ ಸರ್ಕಾರದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ ಪರಿಕಲ್ಪನೆಯಡಿ ಕಲಬುರಗಿ ಜಿಲ್ಲಾಡಳಿತದ ಮುಖ್ಯಸ್ಥರಾಗಿರುವ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಇದೇ ಫೆಬ್ರವರಿ 20 ಶನಿವಾರ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಅಂದು ಜಿಲ್ಲಾಧಿಕಾರಿಗಳು ಬೆಳಿಗ್ಗೆ 10 ರಿಂದ ಸಾಯಂಕಾಲ 5 ಗಂಟೆಯವರೆಗೆ ಗ್ರಾಮದಲ್ಲಿಯೆ ಇದ್ದು, ಗ್ರಾಮದ ಜನರ ಅಳಲನ್ನು ಆಲಿಸಲಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ಸೇಡಂ ಸಹಾಯಕ ಆಯುಕ್ತರು, ಚಿಂಚೋಳಿ ತಾಲೂಕಿನ ತಹಶೀಲ್ದಾರು ಸೇರಿದಂತೆ ಕಂದಾಯ ಇಲಾಖೆಯ ಇತರೆ ಅಧಿಕಾರಿಗಳು ಹಾಜರಿರಲಿದ್ದು, ಅಂದು ರಾತ್ರಿ ಗ್ರಾಮದಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ.
ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿ.ಪಿ.ಎಲ್. ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಿದ್ದಾರೆ. ಗುಡಿಸಲು ರಹಿತ ವಾಸದ ಮನೆ ನಿರ್ಮಾಣ ಕುರಿತು ಕ್ರಮ ವಹಿಸಲಿದ್ದಾರೆ. ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಲಿದ್ದಾರೆ. ಗ್ರಾಮದಲ್ಲಿ ಸ್ಮಶಾನಭೂಮಿ ಲಭ್ಯತೆಯ ಮತ್ತು ಆಶ್ರಯ ಯೋಜನೆಯಡಿ ಅವಶ್ಯಕತೆಯಿದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸಲು ಆದೇಶಿಸಲಿದ್ದಾರೆ.
ಇಂಧನ ಉಳಿತಾಯ: ಚಾಲಕರಿಗೆ ಸಚಿವರಿಂದ 10 ಗ್ರಾಂ. ಚಿನ್ನದ ಪದಕ
ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತು ಆಕಾರ್‍ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಎಲ್ಲಾ ಪಹಣಿಗಳಲ್ಲಿಯೂ ಕೂಡ ಕಾಲಂ ನಂ.3 ಮತ್ತು ಕಾಲಂ ನಂ.9 ತಾಳೆ ಹೊಂದುವಂತೆ ಸೂಕ್ತ ಆದೇಶಗಳನ್ನು ಜಿಲ್ಲಾಧಿಕಾರಿಗಳು ಹೊರಡಿಸಲಿದ್ದಾರೆ. ಗ್ರಾಮದಲ್ಲಿ ಪೌತಿ (ಮರಣ) ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ ನಂ. 9 ತೆಗೆದು ನೈಜ ವಾರಸುದಾರರ ಹೆಸರಿಗೆ ಸೇರಿಸುವುದು, ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವಕ್ಕೆ ಸೂಚನೆ ನೀಡಲಿದ್ದಾರೆ. ಜಮೀನಿನ ಹದ್ದು ಬಸ್ತು, ಪೋಡಿ, ಪೋಡಿ ಮುಕ್ತ ಗ್ರಾಮ, ದರಕಾಸ್ತು ಪೋಡಿ (ನಮೂನೆ 1-5 ಮತ್ತು ನಮೂನೆ 6-10ನ್ನು ಭರ್ತಿ ಮಾಡಿ ದರಕಾಸ್ತು ಪೋಡಿ ಮಾಡುವುದು), ಕಂದಾಯ ಗ್ರಾಮಗಳ ರಚನೆ ಸೇರಿದಂತೆ ಗ್ರಾಮದಲ್ಲಿನ ಇತರೆ ಕುಂದುಕೊರತೆಗಳನ್ನು ಸಹ ಆಲಿಸಿ ಪರಿಹಾರ ಕಲ್ಪಿಸಲಿದ್ದಾರೆ.
ಗ್ರಾಮಸ್ಥರಲ್ಲಿ ಅರಿವು: ಗ್ರಾಮ ವಾಸ್ತವ್ಯದ ಭಾಗವಾಗಿ ಆಧಾರ್ ಕಾರ್ಡ್ ಅನುಕೂಲತೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಆನ್‍ಲೈನ್ ಮುಖಾಂತರ ಪಡೆಯುವ ಬಗ್ಗೆ, ನಿರಂತರ ಮತದಾರರ ಪಟ್ಟಿ ಪರಿಷ್ಕರಣೆ, ಅತೀವೃಷ್ಠಿ-ಅನಾವೃಷ್ಠಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗೃತೆ ಕ್ರಮ ಸೇರಿದಂತೆ ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ವಿವಿಧ ಇಲಾಖೆಗಳ ಸವಲತ್ತುಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಗುತ್ತದೆ.
ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರು ಭರ್ತಿ ಮಾಡುತ್ತಿಲ್ಲ: ಜಗನ್ನಾಥ.ಎಸ್.ಹೆಚ್
ಶಾಲೆ-ಅಂಗನವಾಡಿಗೂ ಭೇಟಿ: ಗ್ರಾಮದಲ್ಲಿರುವ ಸರ್ಕಾರಿ ವಸತಿ ನಿಲಯ, ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗಳಿಗೂ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಭೇಟಿ ನೀಡಿ ಶಿಕ್ಷಣ ಬೋಧನೆ, ಆಹಾರ ಮತ್ತು ಕಲಿಕೆಯ ಗುಣಮಟ್ಟ ಪರಿಶೀಲಿಸಲಿದ್ದಾರೆ.
ಸಾಂಸ್ಕøತಿಕ ಸಂಜೆ: ಗ್ರಾಮ ವಾಸ್ತವ್ಯದಲ್ಲಿ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಾಯಂಕಾಲ ಸಾಂಸ್ಕøತಿಕ ಸಂಜೆ ಸಹ ಆಯೋಜಿಸಲಾಗಿದೆ.
ಗ್ರಾಮ ವಾಸ್ತವ್ಯದಲ್ಲಿ ಭಾಗಿಯಾಗಲು ಡಿ.ಸಿ.ಮನವಿ: ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ಜನರ ಮನೆ ಬಾಗಿಲಿಗೆ ಬರುತ್ತಿರುವುದರಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಜಿಲ್ಲೆಯ ಆಯಾ ಗ್ರಾಮದ ಗ್ರಾಮಸ್ಥರು ತಮ್ಮ ಕುಂದುಕೊರತೆಗಳ ಪರಿಹಾರಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಬಂದು ಬಗೆಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.
ಕೋವಿಡ್ ಲಸಿಕೆಗಳು ಸಂಪೂರ್ಣ ಸುರಕ್ಷಿತ,ಯಾರೂ ಭಯಪಡಬೇಕಿಲ್ಲ: ಡಿಸಿ
ತಹಶೀಲ್ದಾರರಿಂದಲೂ ಗ್ರಾಮ ವಾಸ್ತವ್ಯ: ಜಿಲ್ಲಾಧಿಕಾರಿಗಳು ಚಿಂಚೋಳಿ ತಾಲೂಕಿನ ಕುಂಚಾವರಂನಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಅದೇ ರೀತಿ ಮಹಾರಾಷ್ಟ್ರದ ಗಡಿಯಲ್ಲಿರುವ ಆಳಂದ ತಾಲೂಕಿನ ನಂದಗೂರ ಗ್ರಾಮದಲ್ಲಿ ಕಲಬುರಗಿ ಸಹಾಯಕ ಆಯುಕ್ತರು ಮತ್ತು ಆಳಂದ ತಹಶೀಲ್ದಾರರು ಜಂಟಿಯಾಗಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಉಳಿದಂತೆ ಸೇಡಂ ತಾಲೂಕಿನ ಗೌಡನಹಳ್ಳಿ, ಚಿತ್ತಾಪೂರ ತಾಲೂಕಿನ ಗುಂಡಗುರ್ತಿ, ಶಹಾಬಾದ ತಾಲೂಕಿನ ಅಲದಿಹಾಳ, ಕಲಬುರಗಿ ತಾಲೂಕಿನ ಅವರಾದ(ಬಿ), ಕಮಲಾಪುರ ತಾಲೂಕಿನ ಡೊಂಗರಗಾಂವ, ಕಾಳಗಿ ತಾಲೂಕಿನ ರಟಕಲ್, ಅಫಜಲಪೂರ ತಾಲೂಕಿನ ರೇವೂರ(ಬಿ), ಜೇವರ್ಗಿ ತಾಲೂಕಿನ ರಾಜವಾಳ ಹಾಗೂ ಯಡ್ರಾಮಿ ತಾಲೂಕಿನ ಮಂಗಳೂರ ಗ್ರಾಮದಲ್ಲಿ ಆಯಾ ತಾಲೂಕಿನ ತಹಶೀಲ್ದಾರರು ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…