ಬೆಂಗಳೂರು: ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ವಿಷಯದಲ್ಲಿ ತಾವು ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ, ಪಂಚಮಸಾಲಿ ಸಮುದಾಯ 2ಎ ಗೆ ಸೇರಬೇಕು ಎನ್ನುವ ನಿಲುವು ನಮ್ಮದಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಸಚಿವ ಸಂಪುಟ ಸಭೆಯಲ್ಲಿ ನಡೆದಿದೆ ಎನ್ನಲಾದ ಮಾತಿನ ಚಕಮಕಿ ಸತ್ಯಕ್ಕೆ ದೂರವಾದ ಅಂಶವಾಗಿದೆ. ಪಂಚಮಸಾಲಿ ಸಮುದಾಯಕ್ಕೆ ವಿರೋಧ ವ್ಯಕ್ತಪಡಿಸುವುದು ನಮ್ಮ ನಿಲುವಲ್ಲ. ಮೊದಲಿನಿಂದಲೂ ಈ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರಕಬೇಕು ಎನ್ನುವ ಅಭಿಲಾಷೆಯ ಹಾಗೂ ಪ್ರತಿಪಾದನೆಯನ್ನು ಮಾಡಿಕೊಂಡು ಬಂದಿದ್ದೇವೆ. ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಮೂಲಕ ಸಮುದಾಯದಲ್ಲಿ ನನ್ನ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಹೇಳಿದರು.
ದಿಶಾ ರವಿ ಬಂಧನ ಖಂಡಿ ನ್ಯಾಯಲಯದ ಮುಂದೆ ಮೌನ ಪ್ರತಿಭಟನೆ
ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳು ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಹೋರಾಟಕ್ಕೆ ಈಗಾಗಲೇ ರಾಜ್ಯ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾನೂನಾತ್ಮಕವಾಗಿ ನಡೆಯಬೇಕಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಹೋರಾಟಕ್ಕೆ ಬೇಕಾದ ಬೆಂಬಲವನ್ನು ನಾವು ನೀಡಲು ಸಿದ್ದರಿದ್ದೇವೆ ಎಂದು ಸಚಿವರು ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…