ಬಿಸಿ ಬಿಸಿ ಸುದ್ದಿ

ಹಿಂದುತ್ವವನ್ನು ವಿಶ್ವಕ್ಕೆ ಸಾರಿದ ಪರಾಕ್ರಮಿ ವೀರ ಶಿವಾಜಿ: ಡಾ. ಶರಣಪ್ಪಾ ಬಿ. ಹೊನಗೇಜೀ ಪೂಜಾರಿ

ಕಲಬುರಗಿ: ಭಾರತಖಂಡದಲ್ಲಿ ಹಿಂದುಗಳ ಸಾಮ್ರಾಜ್ಯವನ್ನು ಮರು ಸೃಷ್ಟಿಸಿ ಮೋಘಲರ ಅಧಿಪತ್ಯವನ್ನು ದಮನಿಸಿ ಸದೆಬಡಿದ, ಹಿಂದುತ್ವವನ್ನು ವಿಶ್ವಕ್ಕೆ ಸಾರಿದ, ಹಿಂದುಗಳ ಸಾರ್ವಭೌಮತ್ವವನ್ನು, ಪರಾಕ್ರಮವನ್ನು, ಎತ್ತಿಹಿಡಿದ  ಶೂರ,ಯೋಧ, ಹಿಂದು ಹೃದಯ ಸಾಮ್ರಾಟ, ರಣವಿಕ್ರಮ, ಮಹಾರಾಜ ಛತ್ರಪತಿ ಶಿವಾಜಿ ಮಹಾರಾಜರು ಎಂದು ಅನನ್ಯ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾಲಯದ ಪ್ರಾಂಶುಪಾಲ ಡಾ. ಶರಣಪ್ಪ ಬಿ.ಹೂನಗೇಜೀ (ಪೂಜಾರಿ) ಅವರು ಹೇಳಿದರು.

ಅವರು ನಗರದ ಅನನ್ಯ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ  ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಶಿವಾಜಿ ಮಹಾರಾಜರು ಫೆಬ್ರುವರಿ ೧೯, ೧೬೩೦ ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿನ ಶಿವನೇರಿ ಎನ್ನುವ ಕೋಟೆಯಲ್ಲಿ ಜನಿಸಿದ ವೀರ ಪುತ್ರನ ಪಟ್ಟಾಭಿಷೇಕವು ಜೂನ್ ೬, ೧೬೭೪ ರಂದು ನಡೆಯಿತು. ಶಿವಾಜಿ ಮಹಾರಾಜರು ತಮ್ಮ ಆಡಳಿತಾವಧಿಯಲ್ಲಿ ಪಶ್ಚಿಮ ಮಹಾರಾಷ್ಟ್ರದ ಕೊಂಕಣ, ಸಹ್ಯಾದ್ರಿ ಬೆಟ್ಟಗಳಿಂದ ಪಶ್ಚಿಮ ಮಹಾರಾಷ್ಟ್ರದ ದಕ್ಷಿಣ ಭಾರತದ ತಂಜಾವರ್‌ವರೆಗೆ ತನ್ನ ಸಾಮ್ರಾಜ್ಯವನ್ನು ವಿಸ್ತಿರಿಸಿದ್ದರು ಎಂದರು.

ಬಿಜೆಪೆ ಕಚೇರಿಯಲ್ಲಿ ಓಬಿಸಿ ಮೋರ್ಚಾದಿಂದ ಶಿವಾಜಿ ಮಹರ್ಷಿ ಜಯಂತಿ ಆಚರಣೆ

ಶಿವಾಜಿ ಮಹಾರಾಜರು ಹಿಂದೂ ಧರ್ಮಕ್ಕೆ ಸೇರಿದವರು ಹಾಗೂ ಇವರು ಧಾರ್ಮಿಕ ಸಹಿಷ್ಣುಹಿಯಾಗಿದ್ದರು. ಅವರ ಆಡಳಿತದ ಅವಧಿಯಲ್ಲಿ ಹಿಂದೂಗಳು ಮಾತ್ರವಲ್ಲ, ಮುಸ್ಲಿಂರು ಕೂಡ ಸಂಪೂರ್ಣ ಧಾರ್ಮಿಕ ಸ್ವಾತಂತ್ರ್ಯವನ್ನು ಹೊಂದಿದ್ದರು. ಶಿವಾಜಿ ಹಿಂದುಗಳಿಗೆ ಹೇಗೆ ದೇವಾಲಯವನ್ನು ನಿರ್ಮಿಸಲು ಸಹಕಾರವನ್ನು ನೀಡುತ್ತಿದ್ದರು, ಅಷ್ಟೇ ಸಹಕಾರವನ್ನು ಮುಸ್ಲಿಂರಿಗೆ ಮಸೀದಿಯನ್ನು ನಿರ್ಮಿಸಲು ನೀಡುತ್ತಿದ್ದರು ಎಂದರು.

ಛತ್ರಪತಿ ಶಿವಾಜಿಯು ಅತ್ಯಂತ ಧೈರ್ಯಶಾಲಿ ಸಾಮ್ರಾಟನಾಗಿದ್ದು, ಭಾರತದಾದ್ಯಂತ ಮರಾಠ ಸಾಮ್ರಾಜ್ಯವನ್ನು ಸ್ಥಾಪಿಸಿ, ವಿಸ್ತರಿಸಿದ ಕೀರ್ತಿ ಇವರದ್ದಾಗಿತ್ತು, ಶಿವಾಜಿ ಅವರು ತಮ್ಮ ಜೀವಿತಾವಧಿಯಲ್ಲಿ ತನ್ನ ಸಾಮ್ರಾಜ್ಯವನ್ನು ಮೊಘಲರಿಂದ ಕಾಪಾಡಿಕೊಳ್ಳಲು ಅನೇಕ ವರ್ಷಗಳ ಕಾಲ ಹೋರಾಡಿದ್ದರು. ಇನ್ನು ಕೆಲವರು ಛತ್ರಪತಿ ಶಿವಾಜಿಯನ್ನು ದೇವರೆಂದೇ ಪರಿಗಣಿಸುತ್ತಾರೆ. ದಕ್ಕಿಣ ಭಾರತದಲ್ಲಿ ಇಂದಿಗೂ ಕೂಡ ಪ್ರಾಚೀನ ಹಿಂದೂ ದೇವಾಲಯಗಳು ಅಳಿಯದೇ ಉಳಿದಿದೆಯೆಂದರೆ ಅದಕ್ಕೆ ಮುಖ್ಯ ಕಾರಣ ಛತ್ರಪತಿ ಶಿವಾಜಿಯ ನ್ಯಾಯಯುತ ಆಡಳಿತವಾಗಿದೆ ಎಂದು ಹೇಳಿದರು.

ಜನಪದ ಸಾಹಿತ್ಯ ಸಹಜ ಹುಟ್ಟುವ ಸಾಹಿತ್ಯ: ಡಾ.ರಾಜೇಂದ್ರ ಯರನಾಳೆ

ಶಿವಾಜಿ ಮಾಹಾರಾಜರ ಆಳ್ವಿಕೆ ಸಮಯದಲ್ಲಿ ರಾಯಗಢ ಕೋಟೆಯನ್ನು ಇಡೀ ಮಹಾರಾಷ್ಟ್ರದ ರಾಜಧಾನಿಯನ್ನಾಗಿ ಮಾಡಲಾಯಿತು. ಶಿವಾಜಿ ಮಹಾರಾಜರಿಗೆ ಇಬ್ಬರು ಗಂಡು ಮಕ್ಕಳಿದ್ದರು.ಸಂಭಾಜಿ ಹಾಗೂ ಇನ್ನೋರ್ವ  ರಾಜರಾಮ್. ಹೀಗೆ ಹಿಂದು ಧರ್ಮದ ಸಲುವಾಗಿ ತಮ್ಮ ಪ್ರಾಣವನ್ನೇ ನೀಡಿದ ಪರಕ್ರಮಿ ಯೋದ್ಧಾ ಶಿವಾಜಿ ಅವರುಯವರಾಗಿದ್ದರು ಎಂದರು.

ಈ  ಸಂದರ್ಭದಲ್ಲಿ ಸಿಬ್ಬಂದಿಗಳಾದ ಶ್ರೀಕಾಂತ್, ರಾಜೇಶ್ವರಿ, ಸುಧಾ, ಇಂದುಮತಿ, ರೇಣುಕಾ, ಗೌರಿ ಹಾಗೂ ವಿದ್ಯಾರ್ಥಿ ಪಾಲ್ಗೊಂಡರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: 20 ರಂದು ಡಿಸಿ ಗ್ರಾಮ ವಾಸ್ತವ್ಯ

sajidpress

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago